Posts

ಬ್ಯಾಂಕ್ ಗ್ರಾಹಕರಿಗೆ ದೊಡ್ಡ ರಿಲೀಫ್‌: ಕೊನೆ ಕ್ಷಣದಲ್ಲಿ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆ! UFBU ಅಧಿಕೃತ ಪ್ರಕಟಣೆ

Image
 ಸೆಪ್ಟೆಂಬರ್ 28ರಿಂದ ಸೆಪ್ಟೆಂಬರ್ 30 ರವರೆಗೆ ದೇಶಾದ್ಯಂತ ಆಯೋಜಿಸಲಾಗಿದ್ದ ಮೂರು ದಿನಗಳ ಬ್ಯಾಂಕ್ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ಮತ್ತು ಬ್ಯಾಂಕ್ ಯೂನಿಯನ್‌ಗಳ ಒಕ್ಕೂಟವಾದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಡುವೆ ನಡೆದ ಉನ್ನತ ಮಟ್ಟದ ಮಾತುಕತೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸೆಪ್ಟೆಂಬರ್ 27 ರಂದು ರಾತ್ರಿ 9:30 ಕ್ಕೆ ಐಬಿಎ ಮತ್ತು ಯುಎಫ್‌ಬಿಯು ಪ್ರತಿನಿಧಿಗಳ ನಡುವೆ ಸುದೀರ್ಘ ಚರ್ಚೆಗಳು ನಡೆದವು. ಬ್ಯಾಂಕ್ ನೌಕರರ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಜಂಟಿ ಸಮಿತಿಯನ್ನು ರಚಿಸಲು ಐಬಿಎ ಸಮ್ಮತಿಸಿದ ಹಿನ್ನೆಲೆಯಲ್ಲಿ, ಪ್ರತಿಭಟನಾ ಕಾರ್ಯಕ್ರಮಗಳು ಹಾಗೂ ಮುಷ್ಕರವನ್ನು ಮುಂದೂಡಲು ಯೂನಿಯನ್‌ಗಳು ನಿರ್ಧರಿಸಿವೆ. ಮಾತುಕತೆಯ ನಂತರ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ಬಿಡುಗಡೆ ಮಾಡಿದ ಅಧಿಕೃತ ಜಂಟಿ ಪ್ರಕಟಣೆಯ ಪೂರ್ಣ ವಿವರ ಇಲ್ಲಿದೆ: ಸೆಪ್ಟೆಂಬರ್ 27 ರಂದು ರಾತ್ರಿ 9:30 ಕ್ಕೆ ಐಬಿಎ (IBA) ಮತ್ತು ಯುಎಫ್‌ಬಿಯು (UFBU) ನಡುವೆ ಸಭೆ ನಡೆಯಿತು. ವಿವರವಾದ ಆಲೋಚನೆ ಮತ್ತು ಚರ್ಚೆಗಳ ನಂತರ ಈ ಕೆಳಗಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ: ಉಳಿದ ಶನಿವಾರಗಳಿಗೆ ರಜೆ ಘೋಷಣೆ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಎಲ್ಲಾ ಶನಿವಾರಗಳನ್ನು ರಜಾದಿನಗ...

ಹಾವೇರಿ: ಆಸ್ತಿ ವಿಚಾರಕ್ಕೆ ತಾಯಿ-ಮಗನನ್ನು ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು

Image
 ಹಾವೇರಿ: ಆಸ್ತಿ ವಿಚಾರವಾಗಿ ತಾಯಿ ಮತ್ತು ಮಗನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು 55 ವರ್ಷದ ಪ್ರೇಮಕ್ಕ ಬಡಿಗೇರ ಹಾಗೂ ಪುತ್ರ 38 ವರ್ಷದ ಅವಿನಾಶ್ ಬಡಿಗೇರ ಎಂದು ಗುರುತಿಸಲಾಗಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮಕ್ಕ ಬಡಿಗೇರ ಕೆಲವು ವರ್ಷಗಳ ಹಿಂದೆ ಆಸ್ತಿಯನ್ನು ಖರೀದಿ ಮಾಡಿದ್ದರು. ಆದರೆ ಆಸ್ತಿಯನ್ನು ಪ್ರೇಮಕ್ಕ ಹೆಸರಿಗೆ ವರ್ಗಾವಣೆ ಮಾಡಿರಲಿಲ್ಲ. ಈ ಸಂಬಂಧ ಕಾನೂನು ಹೋರಾಟ ನಡೆಸಿ ಕೋರ್ಟ್ ಮೂಲಕ ಆಸ್ತಿಯನ್ನು ಮರಳಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಇದರಿಂದ ರೊಚ್ಚಿಗೆದ್ದ ತಿರಕಯ್ಯ ಹೊಸಮಠ ಹಾಗೂ ಬಸವರಾಜ ಹೊಸಮಠ ಎಂಬುವವರು ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದಾವಣಗೆರೆಯಲ್ಲಿ : ಅಕ್ರಮ ಸಂಬಂಧ: ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

Image
 45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ ದಾವಣಗೆರೆ: ಅಕ್ರಮ ಸಂಬಂಧದಿಂದ ಮೂರು ಮಕ್ಕಳ ತಾಯಿಯೊಬ್ಬಳು ಪ್ರಿಯಕರನಿಂದಲೇ ಕೊಲೆಯಾಗಿರುವ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ ನಡೆದಿದೆ. 45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇಬ್ಬರ ನಡುವೆ ಕೆಲ ದಿನಗಳಿಂದ ಪದೇ ಪದೇ ಜಗಳ ನಡೆಯುತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಾಗರತ್ನ ಪತಿಯನ್ನು ತ್ಯಜಿಸಿ ತನ್ನ ಮೂರು ಮಕ್ಕಳನ್ನು ಬೇರೆ ಕಡೆ ಮನೆ ಮಾಡಿ ಬಿಟ್ಟಿದ್ದಳು. ತಾನು ಒಂಟಿಯಾಗಿ ಜೀವನ ಮಾಡುತ್ತಿದ್ದಳು. ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರತ್ನಳಿಗೆ ನಾಗರಾಜ್ ಪರಿಚಯವಾಗಿದ್ದ. ಬಳಿಕ ಇಬ್ಬರ ನಡುವೆ ಸಂಬಂಧ ಬೆಳೆದಿತ್ತು ಎಂದು ತಿಳಿದುಬಂದಿದೆ.

ದಾವಣಗೆರೆ : ಕುಡಿದ ಮತ್ತಿನಲ್ಲಿ ಏನು ಮಾಡುತ್ತಿದ್ದೇನೆಂಬುವುದನ್ನು ಯೋಚಿಸದೆ ಮಹಿಳೆಯೊಬ್ಬಳು ತನ್ನ ಪ್ರೀಯಕರನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

Image
  ದಾವಣಗೆರೆ : ಕುಡಿದ ಮತ್ತಿನಲ್ಲಿ ಏನು ಮಾಡುತ್ತಿದ್ದೇನೆಂಬುವುದನ್ನು ಯೋಚಿಸದೆ ಮಹಿಳೆಯೊಬ್ಬಳು ತನ್ನ ಪ್ರೀಯಕರನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ. ಮಂಜಪ್ಪ (40) ಕೊಲೆಯಾದ ದುರ್ದೈವಿ. ಶಬೀನಾ (38) ಕೊಲೆಗೈದ ಆರೋಪಿ. ಹೌದು… ಗಂಡನಿಂದ ವಿಚ್ಛೇದನ ಪಡೆದಿದ್ದ ಶಬೀನಾ ಮತ್ತು ಹೆಂಡತಿ, ಮಕ್ಕಳಿಂದ ದೂರವಿದ್ದ ಮಂಜಪ್ಪ ನಡುವೆ ಪ್ರೀತಿಯಾಗಿದ್ದು, ಬಳಿಕ ಇಬ್ಬರು ಒಟ್ಟಿಗೆ ವಾಸವಿದ್ದರು ಎಂದು ತಿಳಿದು ಬಂದಿದೆ. ಎಂದಿನಂತೆ ಮದ್ಯ ಸೇವಿಸಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಶಬೀನಾ ಸೀರೆಯಿಂದ ಮಂಜಪ್ಪನ ಕತ್ತು ಬಿಗಿದು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಬೀನಾಳನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.

ಕೊಟ್ಟೂರಿನಲ್ಲಿ ಯುವ ಭಾರತೀಯರ ವೇದಿಕೆ ವತಿಯಿಂದ 5ನೇ ವರ್ಷದ ಗಣೇಶೋತ್ಸವ ಹಾಗೂ ಧಣಿ ಧ್ವನಿ ಕಾರ್ಯಕ್ರಮ ಯಶಸ್ವಿ

Image
 ಕೊಟ್ಟೂರು: ಯುವ ಭಾರತೀಯರ ವೇದಿಕೆ, ಕೊಟ್ಟೂರು ವತಿಯಿಂದ 5ನೇ ವರ್ಷದ ಗಣೇಶೋತ್ಸವದ ಸಂಭ್ರಮದ ಅಂಗವಾಗಿ ‘ಧ್ವನಿ ಧ್ವನಿ’ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡೋಣ್ಹೋರು ಜಾನುಕೋಟಿ ಮಠದ ಪೂಜ್ಯ ಶ್ರೀ ಡಾ. ಸಿದ್ದಲಿಂಗ ಶಿವಚಾರ್ಯ ಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಎಂ.ಎಂ.ಜೆ ಶೋಭಿತ್ ವಹಿಸಿದ್ದರು. ಗಣ್ಯರ ಉಪಸ್ಥಿತಿ: ಮುಖ್ಯ ಅತಿಥಿಗಳಾಗಿ ದಾರುಕೇಶ್.ಎಂ.ಎಂ, ಅಟ್ಟಾವಳಿಗೆ ಸಂತೋಷ್, ಅಂಗಡಿ ಪಂಪಾಪತಿ, ವಿಕ್ರಮ್ ನಂದಿ, ನಲ್ಲಿ ಪ್ರಕಾಶ್ ಹಾಗೂ ನಿಲುಂಜಿ ನಾಗರಾಜ್ ಉಪಸ್ಥಿತರಿದ್ದರು. ವಿಶೇಷ ಸನ್ಮಾನ ಹಾಗೂ ಅಭಿನಂದನೆ: ಸಮಾಜಮುಖಿ ಹಾಗೂ ಕಲಾ ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರಗಳ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು: ವಿನಯ್ ಕುಮಾರ್ ಚಿತ್ರಗಾರ (ಗಣೇಶ ಮೂರ್ತಿ ತಯಾರಕರು) ಬಂಡ್ರಿ ಪ್ರಕಾಶ್ ಹಾಗೂ ವೀರಬಸಪ್ಪ (ಪ್ರಸಾದ ತಯಾರಕರು) ನಿಲುಂಜಿ ವೀರೇಶ್ (ಶಾಮಿಯಾನ ವಿತರಕರು) ಬಂಡ್ರಿ ಕಾಲೇಶ್ (ಶ್ರೀ ಬನಶಂಕರಿ ದೇವಸ್ಥಾನ ಸೇವ ಸಮಿತಿ) ದೊಡ್ಡ ವೀರಯ್ಯ (ಶಾಸ್ತ್ರಿಗಳು) ಆದರ್ಶ್ (ಛಾಯಾಗ್ರಾಹಕರು) ಇಶೋಕ್ (ಆರ್ಟ್ಸ್ & ಪೇಂಟ್ಸ್) ಸಾಂಸ್ಕೃತಿಕ ವೈಭವ: ವೇದಿಕೆಯಲ್ಲಿ ಜ್ಯೋತಿ ಹರೀಶ್ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಆಕರ್ಷ್ ಹಳೆಮನಿ ಸ್ವಾಗತ...

ಮುದ್ದಾದ ಬಾಲಕಿ 'ಚಾರ್ವಿಕಾ'ಗೆ 'ಟಿವಿ ನ್ಯೂಸ್ ಕನ್ನಡ' ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು

Image
 ಮನೆಯಂಗಳದ ನಂದಾದೀವಿಗೆ, ಮುದ್ದಿನ ಬಾಲಕಿ ಚಾರ್ವಿಕಾ (Charvika) ಇಂದು ತನ್ನ ಜನ್ಮದಿನದ ಸಂಭ್ರಮದಲ್ಲಿದ್ದಾಳೆ. ತನ್ನ ಮುಗ್ಧ ನಗು ಹಾಗೂ ತುಂಟಾಟಗಳಿಂದ ಎಲ್ಲರ ಗಮನ ಸೆಳೆಯುತ್ತಿರುವ ಈ ಪುಟ್ಟ ರಾಜಕುಮಾರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮಗುವಿನ ನಗು ಮನೆಯಲ್ಲಿ ನೂರು ಆನೆಗಳ ಬಲವಿದ್ದಂತೆ. ಭಗವಂತನು ಚಾರ್ವಿಕಾಗೆ ಸಕಲ ಆಯುರಾರೋಗ್ಯ, ಸುಖ-ಶಾಂತಿ, ನೆಮ್ಮದಿ ಹಾಗೂ ಉಜ್ವಲ ಭವಿಷ್ಯವನ್ನು ಕರುಣಿಸಿ ಆಶೀರ್ವದಿಸಲಿ. ಆಕೆಯ ಮುಂದಿನ ಜೀವನ ಹೂವಿನಂತೆ ಸದಾ ನಳನಳಿಸುತ್ತಿರಲಿ ಮತ್ತು ಅವಳ ಭವಿಷ್ಯದ ಎಲ್ಲಾ ಕನಸುಗಳು ನನಸಾಗಲಿ ಎಂದು ನಾವು ತುಂಬು ಹೃದಯದಿಂದ ಹಾರೈಸುತ್ತೇವೆ. ಶುಭಾಶಯಗಳೊಂದಿಗೆ, ಮಾಲೀಕರು, ಸಂಪಾದಕರು ಹಾಗೂ 'ಟಿವಿ ನ್ಯೂಸ್ ಕನ್ನಡ' ಮಾಧ್ಯಮ ಬಳಗ. Happy Birthday to the little princess Charvika! May your life be filled with love, happiness, good health, and all the dreams you wish for. Best Wishes from the TV NEWS KANNADA Team."

ದಾವಣಗೆರೆ: ಬಿ.ಡಿ. ಲೇಔಟ್‌ನಲ್ಲಿ ತಲ್ವಾರ್‌ ಗಲಾಟೆ ವಿಕೋಪ; ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು, ಆತಂಕದ ವಾತಾವರಣ

Image
 ದಾವಣಗೆರೆ: ನಗರದ ಬಿ.ಡಿ. ಲೇಔಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಭೀಕರ ಮಾರಾಮಾರಿ ಪ್ರಕರಣ ದುರಂತದಲ್ಲಿ ಅಂತ್ಯಗೊಂಡಿದೆ. ನಡುವರಸೆಯಲ್ಲೇ ತಲ್ವಾರ್ ಹಾಗೂ ದೊಣ್ಣೆಗಳಿಂದ ಪರಸ್ಪರ ಅಟ್ಟಾಡಿಸಿ ಹಲ್ಲೆ ನಡೆಸಿದ ಘ್ಚಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಹುಸ್ಸೇನ್ (ಜೀಶನ್) ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯ ಹಿನ್ನೆಲೆ: ನಗರದ ಬಿ.ಡಿ. ಲೇಔಟ್ ನಿವಾಸಿಗಳಾದ ಮೈನು, ಜುನೇದ್, ಇರ್ಫಾನ್ ಸೇರಿದಂತೆ ನಾಲ್ವರು ಯುವಕರು ರಸ್ತೆಯಲ್ಲಿ ನಿಂತಿದ್ದ ವೇಳೆ, ಮಹಮ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ಏಕಾಏಕಿ ತಲ್ವಾರ್ ಹಾಗೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ಈ ವೇಳೆ ಎರಡೂ ಗುಂಪುಗಳ ನಡುವೆ ಭಾರಿ ಗಲಾಟೆ ನಡೆದಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಗಾಯಗೊಂಡಿದ್ದ ಮೊಹಮ್ಮದ್ ಹುಸ್ಸೇನ್ (ಜೀಶನ್) ಅವರು ಚಿಕಿತ್ಸೆ ಸ್ಪಂದಿಸದೆ ನಿನ್ನೆ (ಸೆಪ್ಟೆಂಬರ್ 13) ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಉಳಿದ ಗಾಯಾಳುಗಳಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಹಳೆ ವೈಷಮ್ಯವೇ ಕಾರಣ?: ಈ ಮಾರಾಮಾರಿಗೆ ಹಳೆ ವೈಷಮ್ಯವೇ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯಿಂದಾಗಿ ದಾವಣಗೆರೆ ನಗರದಲ್ಲಿ ಒಂದು ರೀತಿಯ...

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು; ರೌಡಿಶೀಟರ್‌ ಹತ್ಯೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು..!

Image
 ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿ ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಶಿವಮೊಗ್ಗ–ಎನ್.ಆರ್.ಪುರ ರಸ್ತೆಯ ಲಿಂಗಾಪುರ ಬಳಿ ಸೋಮವಾರ ನಡೆದಿದೆ. ಹತ್ಯೆ ಪ್ರಕರಣದ ಆರೋಪಿ ಉಮೇಶ್‌ ನಾಯ್ಕ್‌ (27) ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಬಂಧಿಸಲು ಪೊಲೀಸರು ಲಿಂಗಾಪುರಕ್ಕೆ ತೆರಳಿದ್ದ ವೇಳೆ, ಪೊಲೀಸ್‌ ಸಿಬ್ಬಂದಿ ತಮ್ಮಣ್ಣ ಜಂಬಗಿ ಮೇಲೆ ಆತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ತುಂಗಾನಗರ ಠಾಣೆಯ ಇನ್‌ಸ್ಪೆಕ್ಟರ್‌ ಗುರುರಾಜ್‌ ಕರ್ಕಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಉಮೇಶ್‌ ನಾಯ್ಕ್‌ನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಯಿಂದ ಗಾಯಗೊಂಡ ಪೊಲೀಸ್‌ ಸಿಬ್ಬಂದಿ ತಮ್ಮಣ್ಣ ಜಂಬಗಿಗೂ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇನ್ನು ರಾಮಿನಕೊಪ್ಪದಲ್ಲಿ ಭ...

ಕರ್ನಾಟಕ ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

Image
 ಮಂಗಳೂರು : ನಕಲಿ ವೈದ್ಯರ (ಕ್ವಾಕ್‌ಗಳ) ಹಾವಳಿಯನ್ನು ತಡೆಗಟ್ಟಲು ರಾಜ್ಯಾದ್ಯಂತ ನಡೆಸಲಾದ ಬೃಹತ್ ಕಾರ್ಯಾಚರಣೆಯಲ್ಲಿ, ಆರೋಗ್ಯ ಇಲಾಖೆಯು 2024 ರಿಂದೀಚೆಗೆ ಕರ್ನಾಟಕದಾದ್ಯಂತ ನಕಲಿ ವೈದ್ಯರು ನಡೆಸುತ್ತಿದ್ದ 582 ಅಕ್ರಮ ಚಿಕಿತ್ಸಾಲಯಗಳನ್ನು (ಕ್ಲಿನಿಕ್‌ಗಳನ್ನು) ಮುಚ್ಚಿಸಿದೆ; ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 20 ಪ್ರಕರಣಗಳು ವರದಿಯಾಗಿವೆ. ಹೈಕೋರ್ಟ್‌ನ ಕಟ್ಟುನಿಟ್ಟಿನ ನಿರ್ದೇಶನದ ನಂತರ, 2025 ರಲ್ಲಿ ನಕಲಿ ವೈದ್ಯರು ಮತ್ತು ಅಕ್ರಮ ಚಿಕಿತ್ಸಾಲಯಗಳ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿತು. 2024 ಮತ್ತು 2026 ರ ನಡುವೆ, ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು ರಾಜ್ಯಾದ್ಯಂತ ಮಾನ್ಯತೆ ಪಡೆಯದ 582 ಚಿಕಿತ್ಸಾಲಯಗಳನ್ನು ಸಂಪೂರ್ಣವಾಗಿ ಮುಚ್ಚಿಸಿದ್ದಾರೆ. 87 ಅಪರಾಧಿಗಳಿಗೆ ದಂಡ ವಿಧಿಸಲಾಗಿದ್ದು, 29 ವ್ಯಕ್ತಿಗಳ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ. ಈ ಅಕ್ರಮ ಚಟುವಟಿಕೆಗಳಲ್ಲಿ ಹೆಚ್ಚಿನವು ಗ್ರಾಮೀಣ ಪ್ರದೇಶಗಳಲ್ಲಿ ಪತ್ತೆಯಾಗಿವೆ. ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿದ್ದರೆ, ಕಲಬುರಗಿ ಜಿಲ್ಲೆಯು 127 ಪ್ರಕರಣಗಳೊಂದಿಗೆ ರಾಜ್ಯದಲ್ಲೇ ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರಾಯಚೂರು (124), ಧಾರವಾಡ (75), ಕೋಲಾರ (31), ವಿಜಯಪುರ (24), ಬಳ್ಳಾರಿ (23), ಚಿಕ್ಕಬಳ್ಳಾಪುರ (17), ಬೆಂಗಳೂರು ನಗರ (16) ಮತ್ತು ಕೊಪ್ಪಳ (14) ಜಿಲ್ಲೆಗಳಿವೆ.

ದಾವಣಗೆರೆ: ಹೆದ್ದಾರಿಯಲ್ಲಿ ರಾತ್ರಿ ಅಪಘಾತದಲ್ಲಿ ಚಿರತೆ ಗಂಭೀರ ಗಾಯ: ರಕ್ಷಣೆಗೆ ಹೋದ ಸಿಬ್ಬಂದಿ ಮೇಲೆ ದಾಳಿ;

Image
 ದಾವಣಗೆರೆ: ದಾವಣಗೆರೆಯಲ್ಲಿ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ಚಿರತೆ ರಕ್ಷಣಾ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಿದೆ. ಅಧಿಕಾರಿಗಳು ಚಿರತೆಗೆ ಅರವಳಿಕೆ ಮದ್ದು ನೀಡಿದರೂ, ಅದು ಸಂಪೂರ್ಣವಾಗಿ ಪ್ರಜ್ಞಾಹೀನವಾಗುವ ಮುನ್ನ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಿದ್ದು, ಅವರು ಗಾಯಗೊಂಡಿದ್ದಾರೆ. ಬಳಿಕ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲೇ ನರಳುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲು ಹೋದಾಗ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆರಹಗಿದೆ. ಈ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮಂಗಳವಾರ ಬೆಳಗ್ಗೆ ನಡೆದಿದೆ. ನಿನ್ನೆ ರಾತ್ರಿ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಚಿರತೆಗೆ ರಭಸವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಚರಂಡಿಗೆ ಬಿದ್ದ ಚಿರತೆಗೆ ಗಂಭೀರ ಗಾಯಗಳಾಗಿದೆ. ಇದು ರಾಷ್ಟ್ರೀಯ ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರ ಗಮನಕ್ಕೆ ಬಂದ ತಕ್ಷಣ ಸ್ಥಳಕ್ಕಾಗಮಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ರಾತ್ರಿಯಿಡೀ ಗಾಯದಿಂದ ನರಳಾಡುತ್ತಿದ್ದ ಚಿರತೆಗೆ ಚಿಕಿತ್ಸೆ ಕೊಡುವ ಸಲುವಾಗಿ, ಅದನ್ನು ರಕ್ಷಣೆ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದರು ಎಂದು ಎಸಿಎಫ್ ಆನಂದ್ ತಿಳಿಸಿದ್ದಾರೆ. ಹಂಪಿಯಿಂದ ಆ...

ಏಳು ದಿನ ಪೂರೈಸಿದ ಬಳ್ಳಾರಿ ಪಾದಯಾತ್ರೆ: ಕೇಸರಿ ಪಡೆಯಲ್ಲಿ ರಣೋತ್ಸಾಹ

Image
 ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿಯಾದರೂ ಈ ಭಾಗದ ರೈತರಿಗೆ ಸಮಪರ್ಕವಾಗಿ ನೀರು ಕೊಡುವಲ್ಲಿ ಸ್ಥಳೀಯ ಶಾಸಕ ಸೇರಿದಂತೆ ರಾಜ್ಯ ಸರಕಾರ ವಿಫಲವಾಗಿದೆ. ರೈತರು ಮತ್ತು ಜನರು ಸಂಕಷ್ಟದಲ್ಲಿದ್ದರೂ ಸಿಎಂ ಡಿಕೆಶಿ ಬೆಂಗಳೂರು ರಿಯಲ್ ಎಸ್ಟೇಟ್ ಅಪ್ಪಿಕೊಂಡು ಕೂತಿದ್ದಾರೆ. ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಬಿಜೆಪಿ ಕೈಗೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ 7ನೇ ದಿನ ಪೂರೈಸಿದ್ದು ಸೋಮವಾರ ಕಂಪ್ಲಿ ತಾಲೂಕಿನ ದೇವಲಾಪುರ ತಲುಪಿದೆ. ಗಣಿನಾಡು ಬಳ್ಳಾರಿ ಜಿಲ್ಲೆಗೆ ಪಾದಯಾತ್ರೆ ಪ್ರವೇಶಿಸುತ್ತಿದ್ದಂತೆ ಕೇಸರಿ ಪಡೆಯ ರಣೋತ್ಸಾಹ ಮತ್ತಷ್ಟು ಹೆಚ್ಚಾಗಿದೆ. ಕಂಪ್ಲಿ ಪಟ್ಟಣಕ್ಕೆ ಭಾನುವಾರ ಆಗಮಿಸಿದ ಪಾದಯಾತ್ರೆ 7 ದಿನವಾದ ಸೋಮವಾರ ಬೆಳಗ್ಗೆ ಕಂಪ್ಲಿ ಪಟ್ಟದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪಾದಯಾತ್ರೆ ದೇವಸಮುದ್ರ ಕ್ರಾಸ್ ಮೂಲಕ ಮೆಟ್ರಿ ಗ್ರಾಮದ ಮಾರ್ಗವಾಗಿ ದೇವಲಾಪುರಕ್ಕೆ ತಲುಪಿದ್ದು ಸರಿ ಸುಮಾರು 20 ಕಿಮೀ ಪಾದ ಯಾತ್ರೆಯಲ್ಲಿ ಕ್ರಮಿಸಿದ ಮುಖಂಡರು, ಕಾರ್ಯಕರ್ತರಿಗೆ ಗ್ರಾಮ ಗಳಲ್ಲಿ ಜನರು ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನೇತೃತ್ವದಲ್ಲಿ ಕಂಪ್ಲಿ ವಿಧಾನಸಭೆ ಕ್ಷೇತ್ರದ ಕಂಪ್ಲಿ ಪಟ್ಟಣ ದಿಂದ ಆರಂಭವಾದ 7ನೇ ದಿನದ ಪಾದ ಯಾತ್ರೆ, ಇಡೀ ದಿನ ಕಂಪ್ಲಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿ ಯಲ್ಲಿ ಮುಂದುವರಿಯಿತು.ಸಂಜೆ ಕಂಪ್ಲಿ ...

ದಾವಣಗೆರೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ; ತಲ್ವಾರ್‌ ಹಿಡಿದು ನಡುರಸ್ತೆಯಲ್ಲೇ ಯುವಕರ ಜಗಳ, ಐವರಿಗೆ ಗಂಭೀರ ಗಾಯ..!

Image
 ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ದಾವಣಗೆರೆ: ದಾವಣಗೆರೆಯ ಬಿ.ಡಿ. ಲೇಔಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ಏಕಾಏಕಿ ವಿಕೋಪಕ್ಕೆ ತಿರುಗಿದ್ದು, ನಡುರಸ್ತೆಯಲ್ಲೇ ಯುವಕರು ತಲ್ವಾರ್‌ ಹಾಗೂ ದೊಣ್ಣೆ ಹಿಡಿದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ದಾವಣಗೆರೆ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಗರದ ಬಿ.ಡಿ. ಲೇಔಟ್‌ ನಿವಾಸಿಗಳಾದ ಮೈನು, ಜುನೇದ್‌, ಇರ್ಫಾನ್‌ ಸೇರಿದಂತೆ ನಾಲ್ವರು ಯುವಕರು ರಸ್ತೆಯಲ್ಲಿ ನಿಂತಿದ್ದ ವೇಳೆ ಮಹಮ್ಮದ್‌ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ.

360 ಪುರಾತನ ತಾಮದ ನಾಣ್ಯಗಳು ಪತ್ತೆ ಮಾನ್ವಿ: ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ

Image
 ನಾಣ್ಯಗಳನ್ನು ತಾಮ್ರದಿಂದ ತಯಾರಿಸಲಾಗಿದ್ದು, ಅವುಗಳ ಮೇಲೆ ಉರ್ದು ಭಾಷೆಯ ಲಿಪಿಯ ಬರಹ ಗಳಿವೆ. ಹಿಂದೆ ಈ ಭಾಗದಲ್ಲಿ ಆಡಳಿತ ನಡೆಸಿದವರ ಕಾಲಮಾನದಲ್ಲಿ ಚಲಾವಣೆಯಲ್ಲಿದ್ದ ನಾಣ್ಯ ಗಳಾಗಿರಬಹುದು ಎಂದು ಶಂಕಿಸಲಾಗಿದೆ. ಅವುಗಳನ್ನು ಹೆಚ್ಚಿನ ಅಧ್ಯಯನಕ್ಕಾಗಿ ಪುರಾತತ್ವ ಇಲಾಖೆಗೆ ಕಳುಹಿಸಿ ಕೋಡಲಾಗುವುದು ಮಾನ್ವಿ: ಪಟ್ಟಣದ ಕಿಲ್ಲಾ ಪ್ರದೇಶದಲ್ಲಿರುವ ಮನೆಯೊಂದರ ಅಡಿಪಾಯ ಅಗಿಯುವಾಗ ಮನೆ ಯವರಿಗೆ ಪುರಾತನವಾದ 360 ತಾಮ್ರದ ನಾಣ್ಯಗಳು ಪತ್ತೆಯಾಗಿವೆ. ವಿಷಯ ತಿಳಿದು ತಹಶೀಲ್ದಾರ್ ಭೀಮರಾಯ ಬಿ. ರಾಮ ಸಮುದ್ರ ಅವರು, ಸ್ಥಳಕ್ಕೆ ಭೇಟಿ ನೀಡಿ ಮನೆಯ ಮಾಲೀಕರಿಂದ ನಾಣ್ಯಗಳನ್ನು ವಶಕ್ಕೆ ಪಡೆದರು. ನಂತರ ಮಾತನಾಡಿದ ಅವರು, ಪಟ್ಟಣದಲ್ಲಿ ಕಿಲ್ಲಾ ಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ 360 ತಾಮ್ರದ ನಾಣ್ಯಗಳು ದೊರೆ ತಿದ್ದು, ಅವುಗಳನ್ನು ವಶಕ್ಕೆ ಪಡೆದು ಪೊಲೀಸ್ ಇಲಾಖೆಯ ವಶಕ್ಕೆ ನೀಡಲಾಗಿದೆ. ನಾಣ್ಯಗಳನ್ನು ತಾಮ್ರದಿಂದ ತಯಾರಿಸಲಾಗಿದ್ದು, ಅವುಗಳ ಮೇಲೆ ಉರ್ದು ಭಾಷೆಯ ಲಿಪಿಯ ಬರಹಗಳಿವೆ. ಹಿಂದೆ ಈ ಭಾಗದಲ್ಲಿ ಆಡಳಿತ ನಡೆಸಿದವರ ಕಾಲಮಾನದಲ್ಲಿ ಚಲಾವಣೆಯಲ್ಲಿದ್ದ ನಾಣ್ಯಗಳಾಗಿರ ಬಹುದು ಎಂದು ಶಂಕಿಸಲಾಗಿದೆ. ಅವುಗಳನ್ನು ಹೆಚ್ಚಿನ ಅಧ್ಯಯನಕ್ಕಾಗಿ ಪುರಾತತ್ವ ಇಲಾಖೆಗೆ ಕಳುಹಿಸಿ ಕೋಡಲಾಗುವುದು ಎಂದು ತಿಳಿಸಿದರು.

ಪಡಿತರ ಅಕ್ಕಿ ನೆಪದಲ್ಲಿ ಧಮಕಿ, ಸುಲಿಗೆ ಯತ್ನ; ಮೂವರು ಆರೋಪಿಗಳ ಬಂಧನ

Image
 ಉಡುಪಿ ಸೆಪ್ಟೆಂಬರ್ 03: ಮನೆಯ ಅಂಗಳದಲ್ಲಿ ಪಡಿತರ ಅಕ್ಕಿ ಚೀಲಗಳನ್ನು ಇಟ್ಟುಕೊಂಡಿದ್ದೀರಿ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಲಿಗೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಲಿಗೆ ಹಾಗೂ ಬೆದರಿಕೆ ಒಡ್ಡಿದ ಆರೋಪಿಗಳಾದ ಕೋಟತಟ್ಟು ಗ್ರಾಮದ ನಾಗೇಂದ್ರ ಪುತ್ರನ್ (37) ಹಾಗೂ ಪಾರಂಪಳ್ಳಿ ಗ್ರಾಮದ ಪಡುಕೆರೆ ನಿವಾಸಿ ಪಿ. ಸುಮಂತ್ ಕುಂದರ್ (40) ಅವರನ್ನು ಸೆಪ್ಟೆಂಬರ್ 2ರಂದು ಮೈಸೂರಿನ ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನದ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ, ಮೂಡುಹಡು ಗ್ರಾಮದ ಸಚಿನ್ ಶ್ರೀಯಾನ್ (32) ಎಂಬಾತನನ್ನು ಸೆಪ್ಟೆಂಬರ್ 1ರಂದೇ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ: ಆಗಸ್ಟ್ 31ರಂದು ಈ ಘಟನೆ ನಡೆದಿದ್ದು, ಸಂತ್ರಸ್ತರು ನೀಡಿದ ದೂರಿನನ್ವಯ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕಾಗಿ ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಆರ್. ಹಾಗೂ ಪಿಎಸ್‌ಐ ಮಹಾಂತೇಶ ಜಾಬಗೌಡ ನೇತೃತ್ವದಲ್ಲಿ ಸಿಬ್ಬಂದಿಗಳಾದ ವಿಜಯೇಂದ್ರ, ಶರತ್ ಮತ್ತು ಶಿವ...

ಪತ್ರಕರ್ತೆ ವಶಕ್ಕೆ ಪಡೆದು ಹಲ್ಲೆ ಆರೋಪ: ದೆಹಲಿ ಪೊಲೀಸರ ನಡೆಗೆ KUWJ ಖಂಡನೆ

Image
 ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಪ್ರಶ್ನಿಸಲು ಯತ್ನಿಸಿದ ವೇಳೆ 4PM ಸುದ್ದಿ ವಾಹಿನಿಯ ಪತ್ರಕರ್ತೆ ಶಾಹಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಅತ್ಯಂತ ಗಂಭೀರ ಹಾಗೂ ಖಂಡನೀಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಿಳಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಕೆಯುಡಬ್ಲಯುಜೆ, ಈ ಪ್ರಕರಣದ ಕುರಿತು ನ್ಯಾಯಸಮ್ಮತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. ಘಟನೆ ನಡೆದ ಸ್ಥಳ ಹಾಗೂ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡಲೇ ಸಂರಕ್ಷಿಸಿ, ಸತ್ಯಾಂಶವನ್ನು ಬಹಿರಂಗಪಡಿಸಬೇಕು. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ. ಪತ್ರಕರ್ತರ ಧ್ವನಿಯನ್ನು ಬಲಪ್ರಯೋಗದಿಂದ ಹತ್ತಿಕ್ಕಲು ಸಾಧ್ಯವಿಲ್ಲ. ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವುದು ಪ್ರಜಾಪ್ರಭುತ್ವದ ಮೂಲ ಜವಾಬ್ದಾರಿಯಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪತ್ರಕರ್ತೆ ಶಾಹಿನ್ ಅವರೊಂದಿಗೆ ನಿಲ್ಲುತ್ತದೆ ಎಂದು ತಿಳಿಸಿದೆ.

ಬೆಂಗಳೂರಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರು ಅರೆಸ್ಟ್

Image
 ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ, ಗೋಪಿಗೌಡ ಹಾಗೂ ಪುನೀತ್ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈದ್ ಮಿಲಾದ್ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಆರೋಪಿಗಳು ಗಲಾಟೆ ಮಾಡಿದ್ದು, ಮೆರವಣಿಗೆಯಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೆರವಣಿಗೆ ವೇಳೆ “ನಿಮಗೆ ಯಾರು ಪರ್ಮಿಷನ್ ಕೊಟ್ಟಿದ್ದು?”, “ನೀವು ಜಿಹಾದಿಗಳು” ಎಂದು ಪುನೀತ್ ಕೆರೆಹಳ್ಳಿ ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳ ವಿರುದ್ಧ ಕೋಮು ಸೌಹಾರ್ದತೆಗೆ ಧಕ್ಕೆ ತರುವುದು ಹಾಗೂ ವಿವಿಧ ಸಮುದಾಯಗಳ ನಡುವೆ ಶತ್ರುತ್ವ ಸೃಷ್ಟಿಸಲು ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದು, ಮೆರವಣಿಗೆ ವೇಳೆ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ʼಜಂತರ್ ಮಂತರ್ʼ ಗಲಾಟೆ ಕೇಸ್‌ಗೆ ಬಿಗ್ ಟ್ವಿಸ್ಟ್ ; ಪ್ರಮುಖ ಆರೋಪಿ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ !

Image
 ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿನಿಯೊಬ್ಬರ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ, ಪ್ರಕರಣದ ಪ್ರಮುಖ ಆರೋಪಿ ಸ್ವತಂತ್ರ ಭಾರದ್ವಾಜ್‌ನನ್ನು ಪೊಲೀಸರು ಉತ್ತರ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿಗಳು (CJI) ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಖಡಕ್ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಈ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಹೆಡೆಮುರಿಕಟ್ಟಿದ್ದಾರೆ. ಸಿಜೆಐ ಎಚ್ಚರಿಕೆಯ ಬೆನ್ನಲ್ಲೇ ಮಿಂಚಿನ ಕಾರ್ಯಾಚರಣೆ: ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣವು ನ್ಯಾಯಾಂಗದ ಗಮನಕ್ಕೆ ಬಂದ ತಕ್ಷಣ, ದೇಶದ ಅತ್ಯುನ್ನತ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ಕಾನೂನು ಸುವ್ಯವಸ್ಥೆ ಮತ್ತು ನಾಗರಿಕರ ಸುರಕ್ಷತೆಯ ವಿಚಾರದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಹಲ್ಲೆಕೋರರ ವಿರುದ್ಧ ಯಾವುದೇ ಮುಲಾಜಿಲ್ಲದೆ ತಕ್ಷಣ ಕ್ರಮ ಜರುಗಿಸಬೇಕು ಎಂದು ಕಟುವಾದ ಎಚ್ಚರಿಕೆ ರವಾನಿಸಿದ್ದರು. ಸಿಜೆಐ ಅವರ ಈ ಕಟ್ಟುನಿಟ್ಟಿನ ಸೂಚನೆ ಹೊರಬಿದ್ದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸ್ ತಂಡಗಳು, ತಲೆಮರೆಸಿಕೊಂಡಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್ ಇರುವ ಸ್ಥಳವನ್ನು ಪತ್ತೆಹಚ್ಚಿ ಉತ್ತರ ಪ್ರದೇಶದಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡಿವೆ. ಏನಿದು ಜಂತರ್ ...

ವರ್ಗಾವಣೆಗೊಂಡ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಸಿಬ್ಬಂದಿಯಿಂದ ಭಾವನಾತ್ಮಕ ಬೀಳ್ಕೊಡುಗೆ

Image
 ವರ್ಗಾವಣೆಗೊಂಡ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಸಿಬ್ಬಂದಿಯಿಂದ ಭಾವನಾತ್ಮಕ ಬೀಳ್ಕೊಡುಗೆ ಹುಬ್ಬಳ್ಳಿ: ವರ್ಗಾವಣೆಗೊಂಡ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಪೊಲೀಸ್ ಸಿಬ್ಬಂದಿ ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು. ನಗರದ ನವನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಪೊಲೀಸ್ ಆಯುಕ್ತರಾಗಿ ಭೂಷಣ್ ಬೊರಸೆ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಎನ್. ಶಶಿಕುಮಾರ್ ಅವರು ನೂತನ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು. ಸುಮಾರು ಎರಡು ವರ್ಷ ಎರಡು ತಿಂಗಳ ಕಾಲ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಎನ್. ಶಶಿಕುಮಾರ್ ಅವರನ್ನು ಸಿಬ್ಬಂದಿ ಗೌರವಪೂರ್ವಕವಾಗಿ ಬೀಳ್ಕೊಟ್ಟರು. ಕಮಿಷನರ್ ಕಚೇರಿಯಿಂದ ಹೊರಡುವ ಸಂದರ್ಭದಲ್ಲಿ ಸಿಬ್ಬಂದಿ ಎನ್. ಶಶಿಕುಮಾರ್ ಅವರ ಮೇಲೆ ಪುಷ್ಪವೃಷ್ಟಿ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಸಿಬ್ಬಂದಿ ಅವರ ಪರವಾಗಿ ಜೈಕಾರ ಕೂಗಿ, ಆತ್ಮೀಯವಾಗಿ ಬೀಳ್ಕೊಟ್ಟರು

ನಾಗರತ್ನ ಜೊತೆ ವಿಚ್ಛೇದನದ ಬಳಿಕ ನಟ ದುನಿಯಾ ವಿಜಯ್ ಮೊದಲ ಪೋಸ್ಟ್ ; ಏನಂದ್ರು ಗೊತ್ತಾ..?

Image
 ಬೆಂಗಳೂರು: ನಟ ದುನಿಯಾ ವಿಜಯ್‌ ಹಾಗೂ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ನ್ಯಾಯಾಲಯದ ಆದೇಶದ ಮೂಲಕ ತೆರೆ ಬಿದ್ದ ಬೆನ್ನಲ್ಲೇ, ದುನಿಯಾ ವಿಜಯ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಮೊದಲ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅಭಿಮಾನಿಗಳು, ಮಾಧ್ಯಮ ಮಿತ್ರರು ಹಾಗೂ ತಮ್ಮ ಪರ ನಿಂತವರಿಗೆ ಧನ್ಯವಾದ ಅರ್ಪಿಸಿರುವ ಅವರು, ಮುಂದಿನ ದಿನಗಳಲ್ಲಿ ಈ ವೈಯಕ್ತಿಕ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ. ದುನಿಯಾ ವಿಜಯ್‌ ಹೇಳಿದ್ದೇನು? “ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕೆಂಬುದಕ್ಕೂ, ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ…” ಎಂದು ತಮ್ಮ ಪೋಸ್ಟ್‌ ಆರಂಭಿಸಿರುವ ದುನಿಯಾ ವಿಜಯ್‌, ನ್ಯಾಯಾಲಯದ ಆದೇಶವನ್ನು ಗೌರವದಿಂದ ಸ್ವೀಕರಿಸಿರುವುದಾಗಿ ಹೇಳಿದ್ದಾರೆ. “ನ್ಯಾಯಾಲಯದ ಆದೇಶಕ್ಕೆ ಶಿರಸಾದುರ್ಗಿ ಪ್ರಣಾಮಗಳನ್ನು ಸಲ್ಲಿಸಿ ಶರಣಾಗಿದ್ದೇನೆ. ಕಾನೂನಿನ ಮೇಲೆ ನನಗೆ ನಂಬಿಕೆ ಮತ್ತು ಗೌರವವಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಡಿ.ಕೆ. ಸಿಂಗ್ ಹಾಗೂ ಶ್ರೀ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು.”ಹಾಗೆಯೇ ತಮ್ಮ ಪರವಾಗಿ ವಾದಿಸಿದ ಕಾನೂನು ತಜ್ಞರು ಹಾಗೂ ವಕೀಲರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ದಾವಣಗೆರೆಯ ಖಾಸಗಿ ಬ್ಯಾಂಕ್ ಉದ್ಯೋಗಿ ಮೋಹನ್ ಕುಮಾರ್, ಸಹೋದ್ಯೋಗಿಗಳ ಕಿರುಕುಳ ಮತ್ತು ಸಾಲದ ಒತ್ತಡದಿಂದ ನೊಂದು ಸೆಲ್ಫೀ ವಿಡಿಯೋ ಮಾಡಿ ನಾಪತ್ತೆಯಾಗಿದ್ದಾರೆ. ತುಂಗಾ ಕಾಲುವೆಯಲ್ಲಿ ಅವರ ಬೈಕ್ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Image
 ದಾವಣಗೆರೆ(ಆ.30) ಸಿಬ್ಬಂದಿ ಕಿರುಕುಳ, ಸಾಲ, ಪ್ರಮೋಶನ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ನೊಂದ ಖಾಸಗಿ ಬ್ಯಾಂಕ್ ಸಿಬ್ಬಂದಿಯೊಬ್ಬರ ಸೆಲ್ಫೀ ವಿಡಿಯೋ ಮಾಡಿ ನಾಪತ್ತೆಯಾದ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾದನಬಾವಿ ಗ್ರಾಮದಲ್ಲಿ ನಡೆದಿದೆ. ಅರ್‌ಡಿ ಮೋಹನ್ ಕುಮಾರ್(37) ನಾಪತ್ತೆಯಾಗಿರುವ ವ್ಯಕ್ತ. ಬೈಕ್ ಸಮೇತ ತುಂಗಾ ಕಾಲುವೆಗೆ ಹಾರಿ ಆತ್ಮ೧ಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ನಾಪತ್ತೆಯಾಗಿರೋ ವ್ಯಕ್ತಿ ಸೆಲ್ಫೀ ವಿಡಿಯೋದಲ್ಲಿ ಹೇಳಿದ್ದೇನು? ನಾಪತ್ತೆಯಾಗಿರುವ ವ್ಯಕ್ತಿ ತನ್ನ ನಿರ್ಧಾರಕ್ಕೆ ಮುನ್ನ ಸೇಲ್ಫಿ ವಿಡಿಯೋ ಮಾಡಿದ್ದಾನೆ. ವಿಡಿಯೋದಲ್ಲಿ, ನನ್ನ ಸಾವಿಗೆ ಬ್ಯಾಂಕ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ, ನನಗೆ ಸಾಲವಿದೆ. ಸಾಲ ಮಾಡಿ ಕೊಟ್ರೇಶ್ ಎಂಬುವರ ಬಳಿ ಮಾರ್ಕ್ಸ್ ಕಾರ್ಡ್ ಮಾಡಿಕೊಂಡಿದ್ದೇನೆ. ಪ್ರಮೋಶನ್ ಬರಲಿಲ್ಲ. ಇತ್ತ ಸಾಲ ಸಿಕ್ಕಾಪಟ್ಟೆ ಆಗಿದೆ. ನನ್ನ ಸಾಲಕ್ಕೆ ಬ್ಯಾಂಕ್ ಸಿಬ್ಬಂದಿ ಕಾರಣ. ನನ್ನ ಸಹ ಸಿಬ್ಬಂದಿಗಳಾದ ತಿಪ್ಪೇಶ್, ಮಾರ್ಕ್ಸ್‌ ಕಾರ್ಡ್ ಮಾಡಿಕೊಡುವ ಕೊಟ್ರೇಶ್ ಕಾರಣ. ನನ್ನಿಂದ ಹೀಗಾಗಿ ನೊಂದು ಸಾಯುವ ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಸಾವಿಗೆ ಬ್ಯಾಂಕ್ ಸಿಬ್ಬಂದಿಗಳೇ ಕಾರಣ. ಲಂಚ ಪಡೆದು ಎಲ್ಲರೂ ಸೇರಿ ಮೋಸ ಮಾಡಿದರು ಎಂದು ವಿಡಿಯೋದಲ್ಲಿ ಮೋಹನ್ ಕಣ್ಣೀರು ಹಾಕುತ್ತಾ ನನಗೆ ನ್ಯಾಯ ಕೊಡಿಸಬೇಕು ಅಂತಾ ಎಂಪಿ ರೇಣುಕಾಚಾರ್ಯ ಅವರಿಗೆ ಮೋಹನ್ ಮನವಿ ಮಾಡಿದ್ದ...

ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿ ಅಂದರ್

Image
 ನಕಲಿ ದಾಖಲೆ ಸೃಷ್ಠಿಸಿ ಬೇರಯವರ ಭೂಮಿ ಮಾರಾಟ ಮಾಡಿದ 80 ವರ್ಷದ ಅಜ್ಜಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ವಡಗಾಂವ ಗಣೇಶ ಕಾಲೋನಿ ನಿವಾಸಿ ಮಂದಾಕಿನಿ ಪರಿಶವಾಡಕರ ಬಂಧಿತ ಆರೋಪಿ. ಬೇರೊಬ್ಬರ ಹೆಸರಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ತನ್ನದೆಂದು ಮಾರಾಟ ಮಾಡಿರುವ ಆರೋಪ ಇವರ ಮೇಲೆ ಇದೆ. ಪ್ರಕರಣದ ಹಿನ್ನೆಲೆ ಕಣಬರ್ಗಿ ರಸ್ತೆಯ ಮಹಾಂತೇಶ ನಗರದಲ್ಲಿರುವ ಪ್ಲಾಟ್ ನಂ.2313 ಹಾಗೂ ಸಿಟಿಎಸ್ ನಂ.9449ರ ಜಾಗ ರತ್ನಾ ಯಶವಂತ ಮಲ್ಲೂಕರ ಅವರ ಹೆಸರಿನಲ್ಲಿತ್ತು. ಈ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡುವ ಉದ್ದೇಶದಿಂದ ಮಂದಾಕಿನಿ, ರತ್ನಾ ಅವರಂತೆ ನಟನೆ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. 2023ರ ಸೆಪ್ಟೆಂಬರ್ 16ರಂದು ಬೆಳಗಾವಿ ಉತ್ತರ ಉಪನೋಂದಣಾಧಿಕಾರಿ ಕಚೇರಿಗೆ ತೆರಳಿದ್ದ ಆರೋಪಿ, ರತ್ನಾ ಮಲ್ಲೂಕರ ಅವರ ಹೆಸರಿನಲ್ಲಿ ವೆಬ್ ಕ್ಯಾಮೆರಾದಲ್ಲಿ ಫೋಟೊ ತೆಗೆಸಿಕೊಂಡಿದ್ದಲ್ಲದೆ, ಅವರ ಹೆಸರಿನಲ್ಲಿ ಹೆಬ್ಬೆರಳಿನ ಗುರುತು ಹಾಗೂ ಸಹಿ ನೀಡಿ ಜಾಗವನ್ನು ಮತ್ತೊಬ್ಬರಿಗೆ ಸೇಲ್‌ಡೀಡ್ ಮಾಡಿರುವ ಆರೋಪವಿದೆ. ಜಾಗದ ಮಾಲೀಕರಿಗೆ ಈ ವಂಚನೆ ತಿಳಿದುಬಂದ ಬಳಿಕ ರತ್ನಾ ಮಲ್ಲೂಕರ ಅವರು 2025ರ ಫೆಬ್ರವರಿ 4ರಂದು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮಂದಾಕಿನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ...

ಮತದಾರರ ಕರಡು ಪಟ್ಟಿ ಪ್ರಕಟ: ನಿಮ್ಮ ಹೆಸರನ್ನು ಹೀಗೆ ಚೆಕ್ ಮಾಡಿಕೊಳ್ಳಿ

Image
 ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಮೊದಲ ಹಂತ ಮುಕ್ತಾಯವಾಗಿದ್ದು, ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ರಾಜ್ಯದ ಒಟ್ಟು 5.54 ಕೋಟಿ ಮತದಾರರ ಪೈಕಿ 4.46 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಲ್ಲಿ ಇರಲಿದೆ. ಸೆ. 23ರವರೆಗೆ ಆಕ್ಷೇಪಣಿ ಸಲ್ಲಿಸಲು ಅವಕಾಶವಿದೆ. ceo.karnataka.gov.in ನಲ್ಲಿ ಕರಡು ಮತದಾರರ ಪಟ್ಟಿ ಲಭ್ಯವಾಗಲಿದೆ. ಎಸ್ಐಆರ್‌ ಗೆ ಮೊದಲು ರಾಜ್ಯದಲ್ಲಿ 5.54 ಕೋಟಿ ಮತದಾರರಿದ್ದರು. ಎಸ್ಐಆರ್ ವೇಳೆ 1.08 ಕೋಟಿ ಜನರನ್ನು ಕರಡು ಮತದಾರರು ಪಟ್ಟಿಗೆ ಸೇರ್ಪಡೆ ಮಾಡಲಾಗಿಲ್ಲ. ಈಗ 4.46 ಕೋಟಿ ಮತದಾರರ ಹೆಸರು ಪ್ರಕಟವಾಗಲಿದೆ. 43.8 ಲಕ್ಷ ಮಂದಿಗೆ ನೋಟಿಸ್ ಬರಲಿದೆ. ಎಸ್ಐಆರ್ ಪ್ರಕ್ರಿಯೆ ವೇಳೆ 1.08 ಕೋಟಿ ಮತದಾರರನ್ನು ಎ.ಎಸ್.ಡಿ.ಡಿ.ಒ. ವರ್ಗಕ್ಕೆ ಸೇರಿಸಲಾಗಿದ್ದು, ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರುವುದಿಲ್ಲ. ಉಳಿದ 4.46 ಕೋಟಿ ಮತದಾರರ ಹೆಸರು ಪಟ್ಟಿಯಲ್ಲಿ ಪ್ರಕಟವಾಗಲಿದೆ. ಕರಡು ಮತದಾರರ ಪಟ್ಟಿಯಿಂದ ಹೊರಗೊಳಿಯುವ ಮತದಾರರ ಪೈಕಿ ಗೈರು, ಸ್ಥಳಾಂತರಗೊಂಡ ಮತದಾರರು ನಿಗದಿತ ದಾಖಲೆಗಳೊಂದಿಗೆ ಹೊಸದಾಗಿ ಫಾರ್ಮ್ 6 ಸಲ್ಲಿಕೆ ಮಾಡಬೇಕು. ಇದರೊಂದಿಗೆ ಅಕ್ಟೋಬರ್ 1ಕ್ಕೆ 18 ವರ್ಷ ತುಂಬುವ ಯುವ ಮತದಾರರು ನಿಗದಿತ ದಾಖಲೆಗಳೊಂದಿಗೆ ಫಾರ್ಮ್ 6 ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು.

ಹಿಂದೂ ಧರ್ಮ ಸಮಾಜ ವಿಭಜಿಸುವ ಶಕ್ತಿಯಲ್ಲ, ಇಡೀ ಜಗತ್ತನ್ನು ಒಂದುಗೂಡಿಸುವ ತತ್ವ : ಮೋಹನ್ ಭಗವತ್

Image
 ಭಾರತದಲ್ಲಿ ಮುಸ್ಲಿಮರೇ ಇರಬಾರದು ಎಂದು ಭಾವಿಸುವವರು ಹಿಂದೂವಲ್ಲ' ಎಂದು ಆರ್‌ಎಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.ಆರ್‌ಎಸ್‌ಎಸ್‌ ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಹಿನ್ನೆಲೆ ಮೋಹನ್ ಭಾಗವತ್ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಮಾತನಾಡಿರುವ ಅವರು, ' ಭಾರತದಲ್ಲಿ ವಾಸಿಸುವ ಹಕ್ಕು ಎಲ್ಲ ಸಮುದಾಯದವರಿಗೂ ಇದೆ. ಪ್ರಪಂಚದ ಬೇರೆಲ್ಲೂ ಆಶ್ರಯ ಸಿಗದವರು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಜಗತ್ತಿನ ಎಲ್ಲರೂ ಒಂದೇ ಎಂಬ ಭಾವ ನಮಗಿದೆ. ಇಲ್ಲಿನ ವೈವಿದ್ಯತೆಯನ್ನು ಜಗತ್ತಿಗೆ ತಿಳಿಸುವುದೇ ನಮ್ಮ ಕರ್ತವ್ಯ' ಎಂದಿದ್ದಾರೆ. ಟೊರೊಂಟೊ, ಆ.31- ಹಿಂದೂ ಧರ್ಮವು ಸಮಾಜವನ್ನು ವಿಭಜಿಸುವ ಶಕ್ತಿಯಲ್ಲ; ಬದಲಾಗಿ ಇಡೀ ಜಗತ್ತನ್ನು ಒಂದುಗೂಡಿಸುವ ತತ್ವವನ್ನು ಹೊಂದಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘಚಾಲಕ ಮೋಹನ್‌ ಭಾಗವತ್‌ ಹೇಳಿದರು. ಕೆನಡಾದ ಟೊರೊಂಟೊದಲ್ಲಿ ಕೆನಡಿಯನ್‌ ಹಿಂದೂಸ್‌ ಫಾರ್‌ ಔಟ್‌ರೀಚ್‌, ರಿಲೇಶನ್ಸ್‌ ಅಂಡ್‌ ಡೈಲಾಗ್‌ ಸಂಸ್ಥೆ ಆಯೋಜಿಸಿದ್ದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಪರಂಪರೆಯಲ್ಲಿ ಇತರರಿಗೆ ನೆರವಾಗುವುದು ಮತ್ತು ಇಡೀ ಜಗತ್ತನ್ನು ಒಂದು ಕುಟುಂಬವೆಂದು ಪರಿಗಣಿಸುವ ಮನೋಭಾವ ಅಂತರ್ಗತವಾಗಿದೆ ಎಂದರು. ‘ಹಿಂದೂ’ ಎಂಬ ಪದವನ್ನು ನಿರ್ದಿಷ್ಟ ಭಾಷೆ, ಪೂಜಾ ಪದ್ಧತಿ ಅಥವಾ ಜೀವನಶೈತಿಗೆ ಮಾತ್ರ ಸೀಮಿತಗೊಳಿಸಲಾಗದು. ಹಿಂದೂ ತತ್ವಜ್ಞಾನವು ವೈವ...

ದಾವಣಗೆರೆ ಜಿಲ್ಲಾ ಮಟ್ಟದ ಲೋಕಾಯುಕ್ತ ಸಭೆ: ಅಧಿಕಾರಿಗಳ ಕಾರ್ಯವೈಖರಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ತರಾಟೆ

Image
  ದಾವಣಗೆರೆ : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದರು. ಸೊಳೆಕೆರೆ ಸಂರಕ್ಷಣೆ ಮತ್ತು ಒತ್ತುವರಿ ತೆರವಿಗೆ ತಾಕೀತು ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಚನ್ನಗಿರಿ ತಾಲ್ಲೂಕಿನ ಸೊಳೆಕೆರೆಯನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ಪ್ರದರ್ಶಿಸಬೇಕಿದೆ. ಸುತ್ತಲಿನ ಗ್ರಾಮ, ಹೋಟೆಲ್ ಹಾಗೂ ಕಟ್ಟಡಗಳ ಕೊಳಚೆನೀರು ಕೆರೆಯ ಒಡಲು ಸೇರುತ್ತಿರುವುದನ್ನು ತಡೆಯಬೇಕು. ೨೦೨೫ರಲ್ಲಿ ಈ ಕುರಿತು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದರೂ ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕೆರೆಯ ಸುತ್ತಲಿನ ೯ ಹಳ್ಳlಗಳ ಕೊಳಚೆನೀರು ಶುದ್ಧೀಕರಣಕ್ಕೆ ಶಾಶ್ವತ ಕ್ರಮವಾಗಿ ಎಸ್‌ಟಿಪಿ (STP) ಘಟಕ ಸ್ಥಾಪಿಸಲು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಜಿ.ಪಂ. ಸಿಇಒ ಗೀತಾ ಮಾಧವ ವತ್ಸಲ ರಾವ್ ತಿಳಿಸಿದರು. ಭೂದಾಖಲೆಗಳ ಇಲಾಖೆ ಹಾಗೂ ಎಡಿಎಲ್‌ಆರ್ ಕಚೇರಿಗಳ ಅಕ್ರಮಕ್ಕೆ ಆಕ್ರೋಶ ಚನ್ನಗಿರಿ, ಹೊನ್ನಾಳಿ, ಹರಿಹರ ಹಾಗೂ ಜಗಳೂರು ತಾಲ್ಲೂಕಿನ ಭೂದಾಖಲೆಗಳ ಇಲಾಖೆಯ ಸಹಾಯಕರ ನಿರ್ದೇಶಕರ ಕಾರ್ಯವೈಖ...

ದಾವಣಗೆರೆ ಶಾಸಕ ಸಮರ್ಥ ಶಾಮನೂರು ಅವರ ಕಾರು ಚಿತ್ರದುರ್ಗದ ಹಿರಿಯೂರು ಬಳಿ ಸರಣಿ ಅಪಘಾತಕ್ಕೀಡಾಗಿದ್ದು, ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ

Image
 ಶಾಸಕ ಸಮರ್ಥ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಸಮೀಪ ಬಂದಾಗ, ಅತಿ ವೇಗವಾಗಿ ಬಂದ ಕಾರೊಂದು ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾಗಿದೆ. ಶಾಸಕರು ಪ್ರಯಾಣಿಸುತ್ತಿದ್ದ ಕಾರು ಕೂಡ ಈ ವೇಳೆ ಹಿಂಬದಿಯಲ್ಲೇ ಬರುತ್ತಿತ್ತು. ಅಪಘಾತದ ಗಡಿಬಿಡಿಯಲ್ಲಿ ಶಾಸಕರ ಕಾರಿಗೆ ಮತ್ತೊಂದು ಎರ್ಟಿಗಾ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪಲ್ಟಿಯಾದ ಕಾರಿನಲ್ಲಿದ್ದ ಸಂದೀಪ್ (45) ಎಂಬುವವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಸಂದೀಪ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಶಾಸಕ ಸಮರ್ಥ ಶಾಮನೂರು ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದ ನಂತರ ಮತ್ತೊಂದು ಕಾರಿನಲ್ಲಿ ದಾವಣಗೆರೆಗೆ ಪ್ರಯಾಣ ಮುಂದುವರಿಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗದ ಚಾಲನೆ ಮತ್ತು ಅಜಾಗರೂಕತೆಯಿಂದ ಓವರ್ ಟೇಕ್ ಮಾಡಲು ಹೋದದ್ದು ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಇಡೀ ಕುಟುಂಬವನ್ನೇ ಬಲಿ ಪಡೆದ ಐಫೋನ್ ಇಎಂಐ ವಿವಾದ

Image
 ಐಫೋನ್ ಇಎಂಐ ಪಾವತಿಯ ಸಣ್ಣ ವಿವಾದಕ್ಕೆ ಮಗ ಹಾಗೂ ತಂದೆ, ತಾಯಿ ಮೂವರೂ ಬೆಟ್ಟದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಸಾಮಾಜಿಕ ಗೌರವ ಹಾಗೂ ದುಬಾರಿ ವಸ್ತುಗಳ ವ್ಯಾಮೋಹ ಇಂದಿನ ಯುವ ಪೀಳಿಗೆಯನ್ನು ಎತ್ತ ಸಾಗಿಸುತ್ತಿದೆ ಎಂಬುದಕ್ಕೆ ಮಹಾರಾಷ್ಟ್ರದಲ್ಲಿ ನಡೆದ ಈ ಭೀಕರ ಘಟನೆಯೇ ಸಾಕ್ಷಿ. ಇಲ್ಲಿನ ಛತ್ರಪತಿ ಸಂಭಾಜಿನಗರದಲ್ಲಿನ ಬೆಟ್ಟದಿಂದ ಬಿದ್ದು ತಂದೆ, ತಾಯಿ ಹಾಗೂ ಮಗ ಮೂವರೂ ದಾರುಣವಾಗಿ ಮೃತಪಟ್ಟ ಆಘಾತಕಾರಿ ಘಟನೆ ನಡೆದಿದೆ. ಈ ಇಡೀ ಕುಟುಂಬದ ದುರಂತ ಅಂತ್ಯಕ್ಕೆ ಪ್ರಮುಖ ಕಾರಣ ಒಂದು ದುಬಾರಿ 'ಐಫೋನ್' ಕಂತು ಪಾವತಿ ವಿಚಾರ ಎನ್ನುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, 18 ವರ್ಷದ ಯುವಕ ಕುನಾಲ್ ಇತ್ತೀಚೆಗಷ್ಟೇ ಇಷ್ಟ ಪಟ್ಟಂತೆ ದುಬಾರಿ ಐಫೋನ್ ಖರೀದಿಸಿದ್ದ. ಆದರೆ ಅದರ ಮಾಸಿಕ ಇಎಂಐ ಹಣವನ್ನು ಸಮಯಕ್ಕೆ ಸರಿಯಾಗಿ ಪಾವತಿಸಲು ಆತನ ಬಳಿ ಹಣವಿರಲಿಲ್ಲ. ಆದ್ದರಿಂದ ಆತ ತನ್ನ ತಂದೆ ಮುರಳೀಧರ್ ಚಾಂದ್ಗುಡೆ ಅವರ ಬಳಿ ಹಣಕ್ಕಾಗಿ ವಾದಕ್ಕಿಳಿಯುತ್ತಿದ್ದ. ಬಳಿಕ ಇದೇ ಕಂತು ಕಟ್ಟುವ ವಿಷಯಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಮಗನ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರಿಂದ ಬೇಸರಗೊಂಡ ಕುನಾಲ್, ಮನೆಯಿಂದ ಹೊರಟು ವಾಲುಜ್ ಎಂಐಡಿಸಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ತಿಸ್ಗಾಂವ್ ಪ್ರದೇಶದ ಎತ್ತರದ ಬೆಟ್ಟದ ತುದಿಗೆ ತೆರಳಿ ಆತ್...

ಒಂದೇ ಕುಟುಂಬದ ನಾಲ್ವರು ನಾಪತ್ತೆ ಕೇಸ್‌ಗೆ ಟ್ವಿಸ್ಟ್ – ಲಾಭದಾಸೆ ಹುಟ್ಟಿಸಿ 30 ಕೋಟಿ ದೋಚಿಕೊಂಡು ಎಸ್ಕೇಪ್

Image
 ದಾವಣಗೆರೆ: ಜಿಲ್ಲೆಯಲ್ಲಿ ಇತ್ತೀಚೆಗೆ ದಾಖಲಾಗಿದ್ದ ಒಂದೇ ಕುಟುಂಬದ ನಾಲ್ವರ ನಿಗೂಢ ನಾಪತ್ತೆ ಪ್ರಕರಣಕ್ಕೆ ಈಗ ಬೆಚ್ಚಿ ಬೀಳಿಸುವ ಮಹಾ ಟ್ವಿಸ್ಟ್ ಸಿಕ್ಕಿದೆ. ಮೇಲ್ನೋಟಕ್ಕೆ ಸಾಧಾರಣ ನಾಪತ್ತೆ ಎನ್ನಲಾಗುತ್ತಿದ್ದ ಈ ಪ್ರಕರಣದ ಬೃಹತ್ ವಂಚನಾ ಜಾಲ ಬಯಲಾಗಿದೆ. ಷೇರ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿ ತಿಂಗಳಿಗೆ 1 ಲಕ್ಷ ರೂ. ಲಾಭ ಕೊಡೋದಾಗಿ ಆಸೆ ಹುಟ್ಟಿಸಿ ರಮೇಶ್ ಕುಮಾರ್ ಎಂಬಾತ ಕೆಲವರಿಂದ 30 ಕೋಟಿ ರೂ. ಅಧಿಕ ಹಣ ಪಡೆದಿದ್ದ. ಇದೀಗ ಷೇರು ಪೇಟೆಯಲ್ಲಿ ಹಣ ಕಳೆದುಕೊಂಡು ಹೆಂಡ್ತಿ-ಮಕ್ಕಳ ಜೊತೆ ಊರು ಬಿಟ್ಟಿದ್ದಾನೆ. ಹಣ ಪಡೆದುಕೊಳ್ಳುವಾಗ 1 ಲಕ್ಷ ರೂ.ಗೆ ಪ್ರತಿ ತಿಂಗಳು 8 ಸಾವಿರ ರೂ. ಬಡ್ಡಿ ಕೊಡುವ ಆಮಿಷ ಒಡ್ಡಿದ್ದ. ಈ ರೀತಿ ಅಂದಾಜು ಮೊತ್ತ 25 ರಿಂದ 30 ಕೋಟಿ ರೂ. ಹಣ ಪೀಕಿದ್ದ ಎನ್ನಲಾಗ್ತಿದೆ. 150ಕ್ಕೂ ಹೆಚ್ಚು ಫೋಟೋಗ್ರಾಫರ್ಸ್, ಪತ್ರಕರ್ತರು, ನೌಕರರು ಹಾಗೂ ಸಾರ್ವಜನಿಕರು ಮೋಸಕ್ಕೆ ಒಳಗಾಗಿದ್ದಾರೆ. ಹಣ ನೀಡಿದ ನೂರಾರು ಮಂದಿ ರಮೇಶ್ ಕುಮಾರ್ ಮನೆಗೆ ಮುಗಿಬಿದ್ದು ಗಲಾಟೆ ಆರಂಭಿಸಿದ್ದರು. ಜನರ ಒತ್ತಡ ಹಾಗೂ ಸಾಲದ ಸುಳಿಗೆ ಸಿಲುಕಿ ಕಂಗಾಲಾದ ರಮೇಶ್ ಕುಮಾರ್, ಅನ್ಯಮಾರ್ಗ ಕಾಣದೇ ಕುಟುಂಬದ ನಾಲ್ವರೊಂದಿಗೆ ಊರು ಬಿಟ್ಟು ಪರಾರಿಯಾಗಿದ್ದಾರೆ. ಈತನ ವಿರುದ್ಧ 2023ರಲ್ಲೇ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಆದರೂ ಆತನನ್ನು ಮಟ್ಟಹಾಕದ ಕಾರಣ ಇಂದು ನೂರಾರು ಕುಟುಂಬಗಳು ಬೀದಿಗೆ ಬೀಳುವಂತಾಗಿದೆ

ಬೆಂಗಳೂರಿನಲ್ಲಿ ಕೇವಲ 200 ರೂ.ಗಾಗಿ ಮಂಗಳಮುಖಿಯ ಭೀಕರ ಕೊಲೆ; ಆರೋಪಿ ಬಂಧನ

Image
 ಬೆಂಗಳೂರು: ಕೇವಲ 200 ರೂಪಾಯಿಗಾಗಿ ಮಂಗಳಮುಖಿಯನ್ನು ಬರ್ಬರವಾಗಿ ಇರಿದು ಹತ್ಯೆ  ಮಾಡಿರುವ ಘಟನೆ ಶುಕ್ರವಾರ ರಾತ್ರಿ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ದೇವಿ ಎಂದು ಗುರುತಿಸಲಾಗಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಗೌತಮ್ (29) ಎಂಬಾತನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮೃತ ದೇವಿ ಅವರು ತಡರಾತ್ರಿ ಮೆಜೆಸ್ಟಿಕ್ ಬಸ್ ನಿಲ್ದಾಣದ ಹೊರಭಾಗದಲ್ಲಿ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ರಾಮಮೂರ್ತಿ ನಗರದ ನಿವಾಸಿಯಾದ ಗೌತಮ್ (29) ಎಂಬಾತ ಡಿಯೋ ಸ್ಕೂಟರ್‌ನಲ್ಲಿ ಮೆಜೆಸ್ಟಿಕ್ ಬಳಿ ಬಂದಿದ್ದ. ಮದ್ಯಪಾನ ಮಾಡಿದ್ದ ಆರೋಪಿ ಗೌತಮ್, ರಾತ್ರಿ ವೇಳೆಯಲ್ಲಿ ಜನರ ಬಳಿ ದರೋಡೆ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಬಂದಿದ್ದ. ಸ್ಥಳದಲ್ಲಿದ್ದ ದೇವಿಯ ಬಳಿ ಬಂದ ಆರೋಪಿ ಗೌತಮ್ 200 ರೂಪಾಯಿ ಹಣ ನೀಡುವಂತೆ ಪಟ್ಟುಹಿಡಿದಿದ್ದ. ಆದರೆ, ದೇವಿ ಹಣ ನೀಡಲು ನಿರಾಕರಿಸಿದಾಗ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ, ಆಕ್ರೋಶಗೊಂಡ ಆರೋಪಿ ತನ್ನ ಬಳಿಯಿದ್ದ ಡ್ರ್ಯಾಗರ್‌ನಿಂದ ಮೊದಲಿಗೆ ದೇವಿಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ಬಳಿಕ ಅವರಿಂದ ಬ್ಯಾಗ್ ಮತ್ತು ಮೊಬೈಲ್ ಫೋನ್ ಕಸಿದುಕೊಂಡಿದ್ದಾನೆ. ದೇವಿ ಪ್ರತಿರೋಧಿಸಲು ಯತ್ನಿಸಿದಾಗ ಡ್ರ್ಯಾಗರ್‌ನಿಂದ ಮತ್ತೆ ಮೂರು ಬಾರಿ ದೇಹಕ್ಕೆ ಚುಚ್ಚಿ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ದೇವಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿ...

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ನವವಿವಾಹಿತೆ ಮೇಲೆ ಅತ್ಯಾಚಾರ ಎಸಗಿ ಕೊಂದು ಶವ ಬಾವಿಗೆ ಎಸೆದ ಪಾಪಿಗಳು

Image
 ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರದಲ್ಲಿ ನವವಿವಾಹಿತೆಯೊಬ್ಬರನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿ, ಶವವನ್ನು ಪಾಳು ಬಾವಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಿಳೆಯೊಬ್ಬರು ಗಜೇಂದ್ರ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು. ಮದುವೆಗೆ ಕುಟುಂಬಸ್ಥರ ವಿರೋಧವಿದ್ದ ಹಿನ್ನೆಲೆಯಲ್ಲಿ ದಂಪತಿ ಜಮೀನೊಂದರಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಈ ವೇಳೆ ಸುಮಲತಾ ಬಟ್ಟೆ ಬದಲಾಯಿಸುತ್ತಿದ್ದಾಗ ಗಜೇಂದ್ರನ ಸ್ನೇಹಿತ ಬೋರಯ್ಯ ಹೊಂಚು ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. ಕೊಲೆ ಬಳಿಕ ಬೋರಯ್ಯ ತನ್ನ ಸಹೋದರ ಕಾರಯ್ಯನನ್ನು ಕರೆಸಿಕೊಂಡು, ಇಬ್ಬರೂ ಸೇರಿ ಸುಮಲತಾ ಮೃತದೇಹವನ್ನು ಚಳ್ಳಕೆರೆ ತಾಲೂಕಿನ ಮಹಾದೇವಪುರ ಬಳಿಯ ಪಾಳು ಬಾವಿಗೆ ಎಸೆದಿದ್ದಾರೆ ಎನ್ನಲಾಗಿದೆ. ಇತ್ತ ಸುಮಲತಾ ಅವರ ಮೃತದೇಹವನ್ನು ಕುಟುಂಬಸ್ಥರು ಪತ್ತೆಹಚ್ಚಿ, ಗಜೇಂದ್ರನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಅಸಲಿ ಸಂಗತಿ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೋರಯ್ಯ ಹಾಗೂ ಕಾರಯ್ಯ ಅವರನ್ನು ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ಮ...

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ನದಿಗೆ ಮೃತದೇಹ ಎಸೆದ ಪತ್ನಿ!

Image
 ದಾವಣಗೆರೆ: ದಾವಣಗೆರೆ ತಾಲೂಕಿನ ಪಾಮೇನಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದನೆಂಬ ಕಾರಣಕ್ಕೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪಾಮೇನಹಳ್ಳಿ ಗ್ರಾಮದ ರಘು ಎಂಬಾತನನ್ನು ಆತನ ಪತ್ನಿ ಶೃತಿ, ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸುರೇಶ್ ಸೇರಿ ಕೊಲೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ತುಂಗಭದ್ರಾ ನದಿಗೆ ಬಿಸಾಕಿ ಪರಾರಿಯಾಗಿದ್ದಾರೆ. ರಘು ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದ್ದು, ತನಿಖೆ ಚುರುಕುಗೊಳಿಸಿದ ಪೊಲೀಸರು ಶೃತಿಯ ಸಹೋದರಿಯನ್ನು ವಿಚಾರಣೆ ನಡೆಸಿದಾಗ ಈ ಕೃತ್ಯದ ಕರಾಳ ಸತ್ಯ ಬಯಲಾಗಿದೆ. ಹದಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ನದಿಯಲ್ಲಿ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ

ಚನ್ನಗಿರಿಯಲ್ಲಿ ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ..!

Image
 ಚನ್ನಗಿರಿ: ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡುವ ಸರ್ಕಾರದ ಕ್ರಮವನ್ನು ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಚನ್ನಗಿರಿ ಪಟ್ಟಣದ ಗಾಂಧಿ ವೃತ್ತದಲ್ಲಿ ಭರ್ಜರಿ ಪ್ರತಿಭಟನೆ ನಡೆಸಿದರು. ತಾಲ್ಲೂಕು ಘಟಕದ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ವಿದ್ಯುತ್ ಖಾಸಗೀಕರಣ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ರೈತ ಮುಖಂಡ ಬಸಪುರ ರಂಗನಾಥ್, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಾರ್ವಜನಿಕ ಸ್ವಾಮ್ಯದಲ್ಲಿರುವ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ನೀತಿಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಗ ಶರತ್ ಅಶೋಕ್ ಗಿನ್ನೆಸ್ ರೆಕಾರ್ಡ್;

Image
 ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಪುತ್ರ ಶರತ್ ಅಶೋಕ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸಾಗರದಾಳದಲ್ಲಿ ಬೃಹತ್ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿ 'ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್' ನಿರ್ಮಿಸಿದ್ದಾರೆ. ಈ ಐತಿಹಾಸಿಕ ಸಾಧನೆಗಾಗಿ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಅವರಿಂದ ಅಧಿಕೃತ ಪ್ರಮಾಣಪತ್ರ ಲಭಿಸಿದೆ. ಬೆಂಗಳೂರು (ಆ.14): ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರ ಪುತ್ರ ಶರತ್ ಅಶೋಕ್ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸಾಗರದಾಳದಲ್ಲಿ ಬೃಹತ್ ಭಾರತದ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸುವ ಮೂಲಕ 'ಅಧಿಕೃತ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್' (Guinness World Records) ನಿರ್ಮಿಸಿದ್ದಾರೆ. ದೇಶಕ್ಕೆ ಹಾಗೂ ರಾಜ್ಯಕ್ಕೆ ಹೆಮ್ಮೆ ತಂದಿರುವ ಈ ಸಾಧನೆಗಾಗಿ ಅವರಿಗೆ ಗೌರವಾನ್ವಿತ ಲೆಫ್ಟಿನೆಂಟ್ ಗವರ್ನರ್ ಅವರಿಂದ ಅಧಿಕೃತ ಪ್ರಮಾಣಪತ್ರ ದೊರೆತಿದೆ. ಸಾಗರದಾಳದಲ್ಲಿ ಸಾಹಸಮಯ ಐತಿಹಾಸಿಕ ಸಾಧನೆ ಅಂಡಮಾನ್ & ನಿಕೋಬಾರ್‌ ದ್ವೀಪಗಳ ಸ್ವರಾಜ್‌ದ್ವೀಪದಲ್ಲಿ ಈ ಐತಿಹಾಸಿಕ ಕಾರ್ಯಕ್ರಮ ನಡೆದಿತ್ತು. ಸಾಗರದ ಅತ್ಯಂತ ಆಳದಲ್ಲಿ 'ಅತಿ ದೊಡ್ಡ ಭಾರತೀಯ ತ್ರಿವರ್ಣ ಧ್ವಜ'ವನ್ನು ಅನಾವರಣಗೊಳಿಸುವ (Largest Underwater Flag Unfurl) ಸಾಹಸಮಯ ಪ್ರಯತ್ನದಲ್ಲಿ ಶರತ್ ಅಶೋಕ್ ಪ್ರಮುಖ ಭಾಗವಾಗಿದ್ದರು. ಅಂಡಮಾನ್ ಆಡಳಿತ ಮಂಡಳಿಯಿಂದ ಲೋಕ್ ನಿವಾಸ್‌ನಲ್ಲಿ ಆಯೋಜಿಸಲಾಗಿ...

ಶಾಸಕ ಸುರೇಶ್ ಗೌಡ ಪುತ್ರಿ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಆರೋಪ: FIR ದಾಖಲು

Image
  ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಹಾಗೂ ಎಸಿಪಿ ಗೌತಮ್ ಅವರ ಪತ್ನಿ ಐಶ್ವರ್ಯ ಅವರು ದರ್ಶನಕ್ಕೆ ಅವಕಾಶ ನೀಡುವುದು ತಡವಾದ ವಿಚಾರವಾಗಿ ಪಿಎಸ್‌ಐ ಜೊತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ದೇವಸ್ಥಾನದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಕ್ಕೆ ಹೊಡೆದು ಬೆದರಿಕೆ ಹಾಕಿದ ಆರೋಪ ಶಾಸಕರ ಪುತ್ರಿ ಮೇಲೆ ಕೇಳಿಬಂದಿದೆ. ಆಗಸ್ಟ್ 12ರಂದು ರಾತ್ರಿ ಸುಮಾರು 8.15ರ ವೇಳೆಗೆ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ ಕರ್ತವ್ಯಕ್ಕೆ ಮಂಡ್ಯ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಸವಿತಾ ಬಿ. ಪಾಟೀಲ್ ಅವರನ್ನು ನಿಯೋಜಿಸಲಾಗಿತ್ತು. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಹಾಗೂ ಎಸಿಪಿ ಗೌತಮ್ ಅವರ ಪತ್ನಿ ಐಶ್ವರ್ಯ ಅವರು ದರ್ಶನಕ್ಕೆ ಅವಕಾಶ ನೀಡುವುದು ತಡವಾದ ವಿಚಾರವಾಗಿ ಪಿಎಸ್‌ಐ ಜೊತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಐಶ್ವರ್ಯ ಅವರು ಪಿಎಸ್‌ಐ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಕ್ಕೆ ಹೊಡೆದು, ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್‌ 132, 115(2), 352 ಮತ್ತು 351(2) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇದೇ ವೇಳೆ, ಮಹಿಳ...

ಯುಬಿ ಸಿಟಿಯ ಹೋಟೆಲ್‌ಗಳ ಮೇಲೆ ದಾಳಿ; 45 ಕೆಜಿ ಕೊಳೆತ ಮಾಂಸ ಪತ್ತೆ, ಕಿಚನ್‌ ಸೀಜ್‌

Image
 ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಐಷಾರಾಮಿ ಹೊಟೆಲ್‌ಗಳ ಬಂಡವಾಳ ಬಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಗರದ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಲಾಯಿತು. ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಐಷಾರಾಮಿ ಹೊಟೆಲ್‌ಗಳ ಬಂಡವಾಳ ಬಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಗರದ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಲಾಯಿತು. ಯುಬಿ ಸಿಟಿಯ ಸ್ಕೈ ಹೋಟೆಲ್‌ನಲ್ಲಿ (Raids on UB City hotels) ತಂಡವು ದಾಳಿ ನಡೆಸಿದಾಗ ಕೊಳೆತ ಮಾಂಸ ಹಾಗೂ ಹುಳ ಹಿಡಿದಿರುವ ಆಹಾರ ಸಾಮಾಗ್ರಿಗಳು ಪತ್ತೆಯಾಗಿವೆ. ಪ್ರತಿಷ್ಠಿತ ಹೋಟೆಲ್‌ನಲ್ಲಿ ಬೂಸ್ಟ್ ಬಂದಿರುವ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಆಹಾರ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹತ್ತಕ್ಕೂ ಹೆಚ್ಚು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಂಡಗಳಾಗಿ ದಾಳಿ ನಡೆಸಿದ್ದಾರೆ. ಯುಬಿ ಸಿಟಿ ಸ್ಕೈ ಹೋಟೆಲ್ ಸೇರಿದಂತೆ ಅದರ ಸುತ್ತಮುತ್ತಲಿನ ಪ್ರತಿಷ್ಠಿತ ಹೋಟೆಲ್‌ಗಳ ಅಡುಗೆಮನೆ ಹಾಗೂ ಆಹಾರ ಸಂಗ್ರಹಣಾ ಸ್ಥಳಗಳನ್ನು ಪರಿಶೀಲಿಸಲಾಗಿದೆ. ಅಧಿಕಾರಿಗಳ ಪರಿಶೀಲನೆ ವೇಳೆ ಕೆಲವು...

ಬರಲು ನಮಗೆ ಸಮಯವಿಲ್ಲ- ವಿಡಿಯೋ ಕಾಲ್ ಮೂಲಕ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು

Image
 ಸೋನಿಪತ್: ತಮ್ಮ ಇಡೀ ಜೀವನವನ್ನು ಮೂವರು ಹೆಣ್ಣುಮಕ್ಕಳ ಬೆಳೆಸಲು ಮತ್ತು ಅವರಿಗೆ ಉತ್ತಮ ಶಿಕ್ಷಣ ನೀಡಲು ಮುಡಿಪಾಗಿಟ್ಟಿದ್ದ ವೃದ್ಧ ತಂದೆಯೊಬ್ಬರು (Father) ಹರ್ಯಾಣದ ಸೋನಿಪತ್‌ನ ವೃದ್ಧಾಶ್ರಮವೊಂದರಲ್ಲಿ ಕೊನೆಯುಸಿರೆಳೆದಿದ್ದು, ಅಂತಿಮ ದರ್ಶನಕ್ಕೂ ಬರಲಾಗದ ಪುತ್ರಿಯರು ವಿಡಿಯೋ ಕಾಲ್ (Video Call) ಮೂಲಕ ಅಂತ್ಯಸಂಸ್ಕಾರ(Cremation) ವೀಕ್ಷಿಸಿದ ಅಮಾನವೀಯ ಘಟನೆ ನಡೆದಿದೆ. ಮೂಲತಃ ಮುಂಬೈನ ಜವಳಿ ಉದ್ಯಮಿ ಶಿವಚರಣ್ ರಾಮ್ ರತನ್ ಗುಪ್ತಾ ಅವರು ಕಳೆದ ಎರಡು ವರ್ಷಗಳಿಂದ ಈ ವೃದ್ಧಾಶ್ರಮದಲ್ಲಿ ನೆಲೆಸಿದ್ದರು. ಹಿಂದೆ ಅವರ ಪತ್ನಿ ಮೀನಾ ಕೂಡ ಇಲ್ಲೇ ಮೃತಪಟ್ಟಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗುಪ್ತಾ ಅವರು ಮಂಗಳವಾರ ಮುಂಜಾನೆ 3:30 ರ ಸುಮಾರಿಗೆ ನಿಧನರಾದರು. ಮೃತರ ಮೂವರು ಪುತ್ರಿಯರಾದ ಅನಿತಾ ನೇಪಾಳದಲ್ಲಿ ಶಿಕ್ಷಕಿಯಾಗಿದ್ದರೆ, ನಿಶಾ ಉತ್ತರ ಪ್ರದೇಶದ ಅಜಂಘಡ್‌ನಲ್ಲಿದ್ದರೆ ಕಿರಿಯ ಮಗಳು ಪ್ರಿಯಾ ಮುಂಬೈನಲ್ಲಿ ನೆಲೆಸಿದ್ದಾರೆ. ಗುಪ್ತಾ ಅವರ ನಿಧನದ ಸುದ್ದಿ ತಿಳಿದರೂ ತಮಗೆ ಬರಲು ಸಮಯವಿಲ್ಲ ಎಂದು ಪುತ್ರಿಯರು ತಿಳಿಸಿದ ಕಾರಣ, ವೃದ್ಧಾಶ್ರಮದ ಆಡಳಿತ ಮಂಡಳಿ ಹಾಗೂ ಸ್ಥಳೀಯ ನಿವಾಸಿಗಳ ಸಹಾಯದಿಂದ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪುತ್ರಿಯರು ವಿಡಿಯೋ ಕಾಲ್ ಮೂಲಕವೇ ಕಾರ್ಯವನ್ನು ವೀಕ್ಷಿಸಿದರು. ನೇಪಾಳದಲ್ಲಿರುವ ಮಗಳು ಅನಿತಾ ಆನ್‌ಲೈನ್ ಮೂಲಕ 5,100 ರೂಪಾಯಿ ಕಳುಹಿಸಿ ತಂದೆಯ ಅಂತ್ಯಸಂಸ್ಕಾರವನ್ನು ಸರಿಯಾಗಿ ನೆ...

'ಪ್ರೆಸ್' ಎಂದು ಹಾಕಿಕೊಂಡರೆ ವಾಹನ ಜಪ್ತಿ; ಬ್ಲ್ಯಾಕ್‌ಮೇಲ್ ಮಾಡುವ ನಕಲಿ ಪತ್ರಕರ್ತರಿಗೆ ಜೈಲು ಕಾಯಂ: ಜಿಲ್ಲಾಧಿಕಾರಿ ಎಚ್ಚರಿಕೆ..!

Image
 ದಾವಣಗೆರೆ: ಮುದ್ರಣ ಮತ್ತು ದೃಶ್ಯ ಮಾಧ್ಯಮದ ಹೆಸರು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಸಂಸ್ಥೆಗಳಿಗೆ ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಎಚ್ಚರಿಕೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಕರ್ತರ ಮೊದಲ ಸಮನ್ವಯ ಸಭೆಯಲ್ಲಿ ಉಭಯ ಅಧಿಕಾರಿಗಳು ಮಾತನಾಡಿದರು. ಮಾಧ್ಯಮ ಕ್ಷೇತ್ರದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಅಥವಾ ಅಕ್ರಮ ಹಣ ವಸೂಲಿಯಲ್ಲಿ ತೊಡಗುವ ಯಾವುದೇ ನಕಲಿ ವ್ಯಕ್ತಿಗಳಿರಲಿ, ಅವರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಲು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಡಿಸಿ, ಎಸ್‌ಪಿ ಹಾಗೂ ಜಿಪಂ ಸಿಇಒ ಜಂಟಿಯಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದೇವೆ. ಜೊತೆಗೆ ಅಂಥವರ ಪತ್ರಿಕೆ ಹಾಗೂ ಸುದ್ದಿ ವಾಹಿನಿಗಳ ಸಂಪಾದಕರು ಹಾಗೂ ಮಾಲೀಕರಿಗೆ ಜಂಟಿ ಪತ್ರ ರವಾನಿಸಲಾಗುವುದು ಎಂದು ಡಿಸಿ ಎಚ್ಚರಿಸಿದರು. ಇಂದಿನಿಂದಲೇ 'ಪ್ರೆಸ್' ವಾಹನಗಳ ಜಪ್ತಿ ಕಾರ್ಯಾಚರಣೆ: ಅನಧಿಕೃತ ವ್ಯಕ್ತಿಗಳಿಂದ ಮಾಧ್ಯಮದ ಹೆಸರು ದುರುಪಯೋಗವಾಗುವುದನ್ನು ತಡೆಯಲು ಜಿಲ್ಲಾದ್ಯಂತ ಇಂದಿನಿಂದಲೇ 'ಪ್ರೆಸ್' ಕಾರ್ಯಾಚರಣೆ ಆರಂಭವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್...

ದಾವಣಗೆರೆ: ವಿವಿಧ ಪರೀಕ್ಷಾ ಕೇಂದ್ರಗಳಿಗೆ ಎಸ್‌ಪಿ ಶೇಖರ್ ಹೆಚ್.ಟಿ ಭೇಟಿ; ನಾಗರಿಕ ಪೊಲೀಸ್ ಕಾೆನ್ಸ್‌ಸ್ಟೆಬಲ್ ಲಿಖಿತ ಪರೀಕ್ಷೆ ಪರಿಶೀಲನೆ!

Image
 ದಾವಣಗೆರೆ: ದಾವಣಗೆರೆ ನಗರದಲ್ಲಿ ನಾಗರಿಕ ಪೊಲೀಸ್ ಕಾೆನ್ಸ್‌ಸ್ಟೆಬಲ್ ಹುದ್ದೆಗಳ ಲಿಖಿತ ಪರೀಕ್ಷೆಯು ಸುಗಮವಾಗಿ ನಡೆಯುವಂತೆ ಎಚ್ಚರಿಕೆ ವಹಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶೇಖರ್ ಹೆಚ್.ಟಿ, ಐಪಿಎಸ್ ಅವರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾನ್ಯ ಜಿಲ್ಲಾಧಿಕಾರಿಗಳೊಂದಿಗೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಎಸ್‌ಪಿ ಅವರು, ಪರೀಕ್ಷಾ ವ್ಯವಸ್ಥೆ, ಕಲ್ಪಿಸಲಾದ ಭದ್ರತಾ ಕ್ರಮಗಳು ಹಾಗೂ ಅಭ್ಯರ್ಥಿಗಳಿಗೆ ಮಾಡಲಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಪರೀಕ್ಷೆಯು ಯಾವುದೇ ಗೊಂದಲವಿಲ್ಲದೆ ಸುಗಮ, ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿದರು. ಅಲ್ಲದೆ, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತಮ್ಮ ಕರ್ತವ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದ್ದಾರೆ.

20 ಸಚಿವರ ಡಿಕೆಶಿ ಸಂಪುಟ: ಯಾವ ಸಮುದಾಯಕ್ಕೆ ಎಷ್ಟು ಪ್ರಾತಿನಿಧ್ಯ?

Image
 ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೊಸದಾಗಿ 19 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಮುಖ್ಯಮಂತ್ರಿ ಸೇರಿ ಸಂಪುಟದ ಒಟ್ಟು ಸದಸ್ಯರ ಸಂಖ್ಯೆ ಗರಿಷ್ಠ ಮಿತಿ 33ಕ್ಕೆ ತಲುಪಿದೆ. ಪ್ರಾದೇಶಿಕ ಸಮತೋಲನ ಹಾಗೂ ಜಾತಿವಾರು ಸಮೀಕರಣವನ್ನು ಗಮನದಲ್ಲಿಟ್ಟುಕೊಂಡು ಹೊಸ ಸಂಪುಟವನ್ನು ರಚಿಸಲಾಗಿದೆ. ನೂತನ ಸಂಪುಟದ ಜಾತಿ ಪ್ರಾತಿನಿಧ್ಯದ ವಿವರ ಇಲ್ಲಿದೆ. ಸಂಪುಟದಲ್ಲಿ ಲಿಂಗಾಯತ ಹಾಗೂ ಪರಿಶಿಷ್ಟ ಜಾತಿ ಸಮುದಾಯಕ್ಕೆ ತಲಾ 7 ಸ್ಥಾನ ಸಿಕ್ಕಿದ್ದರೆ, ಒಕ್ಕಲಿಗ ಮತ್ತು ಹಿಂದುಳಿದ ವರ್ಗಕ್ಕೆ ತಲಾ 5 ಹಾಗೂ 7 ಸ್ಥಾನ ನೀಡಲಾಗಿದೆ. ಉಳಿದಂತೆ ಅಲ್ಪಸಂಖ್ಯಾತರಿಗೆ 4, ಪರಿಶಿಷ್ಟ ಪಂಗಡಕ್ಕೆ 3 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಜಾತಿವಾರು ಸಚಿವರ ವಿವರ ಲಿಂಗಾಯತ ಸಮುದಾಯ ಎಂ. ಬಿ. ಪಾಟೀಲ್ ಈಶ್ವರ್ ಖಂಡ್ರೆ ಬಸವರಾಜ್ ರಾಯರೆಡ್ಡಿ ವಿಜಯಾನಂದ ಕಾಶಪ್ಪನವರ ಲಕ್ಷ್ಮಣ ಸವದಿ ಡಾ. ಶರಣ ಪ್ರಕಾಶ್ ಪಾಟೀಲ್ ಎಸ್. ಎಸ್. ಮಲ್ಲಿಕಾರ್ಜುನ ಒಕ್ಕಲಿಗ ಸಮುದಾಯ ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ) ಕೃಷ್ಣ ಬೈರೇಗೌಡ ಎನ್. ಚೆಲುವರಾಯಸ್ವಾಮಿ ಎಚ್. ಸಿ. ಬಾಲಕೃಷ್ಣ ಕೆ. ಎಂ. ಶಿವಲ...

11 ತಿಂಗಳ ಕಂದಮ್ಮ ಸಾವು; ಅವಧಿ ಮೀರಿದ ಔಷಧ ನೀಡಿದ ಆರೋಪದಡಿ ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ..!

Image
 ದಾವಣಗೆರೆ: ದಾವಣಗೆರೆ ಜಿಲ್ಲೆಯ Honnali (ಹೊನ್ನಾಳಿ) ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ 11 ತಿಂಗಳ ಹೆಣ್ಣು ಮಗು ಚಿಕಿತ್ಸೆ ವೇಳೆ ಮೃತಪಟ್ಟಿದ್ದು, ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮಗುವಿಗೆ ಅವಧಿ ಮುಗಿದ ಔಷಧ ನೀಡಿದ ಪರಿಣಾಮವೇ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮೃತ ಮಗುವನ್ನು ಹನುಮನಹಳ್ಳಿ ಗ್ರಾಮದ ವಸುಂಧರ ಹಾಗೂ ಲೋಕೇಶ್ ದಂಪತಿಯ 11 ತಿಂಗಳ ಪುತ್ರಿ ಪೂರ್ವಿಕ ಎಂದು ಗುರುತಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಗುವನ್ನು ಹೊನ್ನಾಳಿ ಸಮೀಪದ ಸಾಸ್ವೆಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ವೈದ್ಯರು ನೀಡಿದ ಔಷಧವನ್ನು ಹಾಕಿದ ತಕ್ಷಣ ಮಗುವಿನ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಕೆಲವೇ ಕ್ಷಣಗಳಲ್ಲಿ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧವನ್ನು ಬಳಸಲಾಗಿದೆ ಎಂಬ ಗಂಭೀರ ಆರೋಪವನ್ನು ಪೋಷಕರು ಮಾಡಿದ್ದು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪುತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸರು ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ನಂತರ ಸಾವಿನ ನಿಖರ ಕಾರಣ ಬಹಿರಂಗವಾಗುವ ನಿರೀಕ್ಷೆಯಿದೆ.

ಶೀರ್ಷಿಕೆ: "ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಭವಿಷ್ಯ" – ದಾವಣಗೆರೆಯಲ್ಲಿ SIR ಮತದಾರರ ಜಾಗೃತಿ ಅಭಿಯಾನ ಯಶಸ್ವಿ!

Image
 ದಾವಣಗೆರೆ: "ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಭವಿಷ್ಯ" ಹಾಗೂ "ನನ್ನ ಮತ - ನನ್ನ ಹಕ್ಕು" ಎಂಬ ಸದುದ್ದೇಶದೊಂದಿಗೆ ದಾವಣಗೆರೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ SIR (ಮತದಾರರ ಜಾಗೃತಿ) ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಮತ್ತು ಮತದಾನದ ಮಹತ್ವವನ್ನು ಅರಿಯಬೇಕು ಎಂಬ ಉದ್ದೇಶದಿಂದ ಈ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ನೇತೃತ್ವ ಹಾಗೂ ಗಣ್ಯರ ಉಪಸ್ಥಿತಿ: ಈ ಬೃಹತ್ ಜಾಗೃತಿ ಅಭಿಯಾನಕ್ಕೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಮಹಾತೇಶ್ ಅವರು ನೇತೃತ್ವ ವಹಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ ಪ್ರತಿಯೊಂದು ಮತದ ಮಹತ್ವವನ್ನು ಸಾರಿದರು. ಕಾರ್ಯಕ್ರಮದಲ್ಲಿ AERo ಪ್ರಭು ಸರ್ ಹಾಗೂ ರಶ್ಮಿ ಮೇಡಂ ಅವರು ವಿಶೇಷವಾಗಿ ಉಪಸ್ಥಿತರಿದ್ದು, ಅಭಿಯಾನದ ಯಶಸ್ಸಿಗೆ ಮಾರ್ಗದರ್ಶನ ನೀಡಿದರು. ಕ್ಷೇತ್ರ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಶ್ರಮ: ಕ್ಷೇತ್ರ ಮಟ್ಟದಲ್ಲಿ ಸಾರ್ವಜನಿಕರನ್ನು ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿರುವ BLA ಹಾಗೂ BLO ಗಳ ತಂಡವು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿತು. ಪ್ರಮುಖರಾದ ಟಿ. ಹುಚ್ಚಪ್ಪ ಸರ್ (T. Huchappa Sir) ಹಾಗೂ ಎಲ್ಲಾ BLO ಗಳು ಒಟ್ಟಾಗಿ ಸೇರಿಕೊಂಡು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸ...

ಜಂತರ್ ಮಂತರ್‌ನಲ್ಲಿ ಆಹಾರ ನೀಡುತ್ತಿದ್ದ ಜುನೇದ್ ಮನೆ ಮೇಲೆ ಯುಪಿ ಪೊಲೀಸ್ ದಾಳಿ: CJP ಆಕ್ರೋಶ

Image
 ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಜನರಿಗೆ ಆಹಾರ ಮತ್ತು ಕುಡಿಯುವ ನೀರು ಪೂರೈಸುತ್ತಿದ್ದ ಸಾಮಾಜಿಕ ಸ್ವಯಂಸೇವಕ ಮೊಹಮ್ಮದ್ ಜುನೇದ್ ಅವರ ಕುಟುಂಬಸ್ಥರ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಳಿ ನಡೆಸಿ, ಕಿರುಕುಳ ನೀಡುತ್ತಿದ್ದಾರೆ ಎಂದು ಕಾಕ್ರೋಜ್‌ ಜನತಾ ಪಾರ್ಟಿ ಗಂಭೀರ ಆರೋಪ ಮಾಡಿದೆ. ಅಪರಾಧಿಗಳನ್ನ ಬಂಧಿಸುವ ಬದಲು, ಸಮಾಜಸೇವೆ ಮಾಡುತ್ತಿರುವ ಸ್ವಯಂಸೇವಕರನ್ನ ಹಾಗೂ ಅವರ ಕುಟುಂಬದವರ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಟ್ವಿಟರ್) ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಸಿಜೆಪಿ, 'ಉತ್ತರ ಪ್ರದೇಶ ಪೊಲೀಸರು ಕ್ರಿಮಿನಲ್‌ಗಳನ್ನ ಹಿಡಿಯುವ ಬದಲು, ಜಂತರ್ ಮಂತರ್‌ನಲ್ಲಿ ಜನರಿಗೆ ಉಚಿತವಾಗಿ ಆಹಾರ ಮತ್ತು ನೀರು ವಿತರಿಸುತ್ತಿದ್ದ ನಮ್ಮ ಸ್ವಯಂಸೇವಕ ಮೊಹಮ್ಮದ್ ಜುನೇದ್ ಅವರ ಹಿಂದೆ ಬಿದ್ದು ಸಮಯ ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಜುನೇದ್ ಅವರ ಕುಟುಂಬಕ್ಕೆ ಪೊಲೀಸರು ತೀವ್ರ ಕಿರುಕುಳ ನೀಡುತ್ತಿದ್ದು, ಈ ಸಮಯದಲ್ಲಿ ನಾವು ಅವರ ಜೊತೆಗೆ ನಿಲ್ಲುತ್ತೇವೆ' ಎಂದು ಸ್ಪಷ್ಟಪಡಿಸಿದೆ. ಮಾಹಿತಿಗಳ ಪ್ರಕಾರ, ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಧರಣಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ಜನರಿಗೆ ಮೊಹಮ್ಮದ್ ಜುನೇದ್ ಪ್ರತಿ ದಿನ ಉಚಿತ ಆಹಾರ ಮತ್ತು ನೀರು ಪೂರೈಸುವ ಕೆಲಸ ಮಾಡುತ್ತ...

ನೀಟ್ ವಿಚಾರಕ್ಕೆ ಸುಪ್ರೀಂ ಕೋರ್ಟ್‌ ಎಂಟ್ರಿ! ಕೇಂದ್ರ ಸರ್ಕಾರಕ್ಕೆ ಚಾಟಿ - ಗಮನಿಸುತ್ತಿದ್ದೇವೆ, ಇದೇ ರೀತಿ ಮುಂದುವರಿಯಲು ಬಿಡಲಾಗದು

Image
 ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ಆನ್‌ಲೈನ್ ಪರೀಕ್ಷಾ ವ್ಯವಸ್ಥೆಯತ್ತ ಗಮನಹರಿಸಲು ಸೂಚಿಸಿದೆ. ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸ ಅಂತ್ಯಗೊಳಿಸಿದ್ದಾರೆ. ಈ ಬೆನ್ನಲ್ಲೇ, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಹೊಸದಿಲ್ಲಿ: ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಲೋಪದೋಷಗಳ ಸರಣಿಗೆ ತಕ್ಷಣವೇ ಬ್ರೇಕ್ ಹಾಕುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲದೆ, ಮುಂಬರುವ ದಿನಗಳಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ವ್ಯವಸ್ಥೆಯತ್ತ ಕೊಂಡೊಯ್ಯುವ ಬಗ್ಗೆ ಸರ್ಕಾರದ ಯೋಜನೆಗಳೇನು ಎಂಬುದರ ಕುರಿತು ವರದಿ ನೀಡುವಂತೆ ನಿರ್ದೇಶಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರನ್ನೊಳಗೊಂಡ ವಿಭಾಗೀಯ ಪೀಠವು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಪೀಠವು, "ಈ ಪರಿಸ್ಥಿತಿ ಹೀಗೆಯೇ ಮುಂದುವರಿಯಲು ನಾವು ಬಿಡುವುದಿಲ್ಲ. ಈ ಪ್ರಕರಣದ ಪ್ರತಿಯೊಂದು ಬೆಳವಣಿಗೆಯನ್ನು ನಾ...

ನ್ಯಾಯಕ್ಕಾಗಿ ಸಮಾಧಿ ಅಗೆದು ತಾಯಿಯ ಕೊಳೆತ ಶವವನ್ನೇ ಬೈಕ್ನಲ್ಲಿ ತಂದ ಮಕ್ಕಳು: ಬೆಚ್ಚಿಬಿದ್ದ ದಾವಣಗೆರೆ!

Image
 ದಾವಣಗೆರೆ: ಮೂರು ತಿಂಗಳ ಹಿಂದೆ ಹತ್ಯೆಯಾಗಿದ್ದ ತಮ್ಮ ತಾಯಿಯ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿದ ಮಕ್ಕಳು, ಹೂತಿಟ್ಟಿದ್ದ ತಾಯಿಯ ಕೊಳೆತ ಶವವನ್ನು ಸಮಾಧಿಯಿಂದ ಹೊರತೆಗೆದು, ಬಟ್ಟೆಯಲ್ಲಿ ಸುತ್ತಿಕೊಂಡು ರಾತ್ರೋರಾತ್ರಿ ಬೈಕ್ ಮೇಲೆ ಆಸ್ಪತ್ರೆಗೆ ಹೊತ್ತೊಯ್ದ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಅದಾಪುರ ಗ್ರಾಮದಲ್ಲಿ ನಡೆದಿದೆ. ತಮ್ಮ ತಾಯಿಯ ಸಾವು ಸಹಜವಲ್ಲ, ಅದೊಂದು ಕೊಲೆ ಎಂದು ಆರೋಪಿಸಿರುವ ಮಕ್ಕಳು, ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೆಗೆ ನ್ಯಾಯಕ್ಕಾಗಿ ಆಗ್ರಿಸಿದ ಮಕ್ಕಳು ಇಡೀ ದಾವಣಗೆರೆ ಜಿಲ್ಲೆಯನ್ನೇ ಬೆಚ್ಚಿಬೀಳಿಸುವಂತಹ ಕೆಲಸ ಮಾಡಿದ್ದಾರೆ. ಮೂರು ತಿಂಗಳ ಹಿಂದೆ ಅಂತ್ಯಕ್ರಿಯೆ ಮಾಡಿದ್ದ ತಾಯಿಯ ಶವವನ್ನು ಸಮಾಧಿಯಿಂದ ಹೊರತೆಗೆದು ಬೈಕ್‌ನಲ್ಲಿ ಹೊತ್ತುಕೊಂಡು ಜಿಲ್ಲಾಸ್ಪತ್ರೆಗೆ ಬಂದಿರುವ ಘೋರ ಘಟನೆ ನಡೆದಿದೆ. ಆದಾಪುರ ಗ್ರಾಮದ ಈರಮ್ಮ ಎಂಬುವವರು ಏಪ್ರಿಲ್ 29ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ ವೈದ್ಯರು ಇದೊಂದು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ ಇದನ್ನು ಒಪ್ಪದ ಮಕ್ಕಳು, ತಾಯಿಯ ಸಾವಿಗೆ ಅಕ್ಕಪಕ್ಕದ ಮನೆಯವರೇ ಕಾರಣ ಎಂದು ಮಗ ಮಂಜುನಾಥ್ ಆರೋಪಿಸಿದ್ದರು. ಈ ಸಂಬಂಧ 11 ಜನರ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಲೆಬೆನ್ನೂರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂ...

BREAKING : 20 ದಿನಗಳ ಉಪವಾಸ ಅಂತ್ಯ ! ಜಂತರ್ ಮಂತರ್‌ನಿಂದ ‘ಸೋನಂ ವಾಂಗ್ಚುಕ್’ ಆಸ್ಪತ್ರೆಗೆ ದಾಖಲು |

Image
 ನವದೆಹಲಿ: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶನಿವಾರ ಬೆಳಗಿನ ಜಾವ ಜಂತರ್ ಮಂತರ್‌ಗೆ ಬಂದ ಪೊಲೀಸರು, ಪ್ರತಿಭಟನಾಕಾರರ ಘೋಷಣೆ ಹಾಗೂ ವಿರೋಧದ ನಡುವೆ ವಾಂಗ್ಚುಕ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ದೆಹಲಿ ಪೊಲೀಸರು ಪ್ರಕಟಣೆ ಹೊರಡಿಸಿ, ದೆಹಲಿ ಹೈಕೋರ್ಟ್‌ನ ಆದೇಶ ಮತ್ತು ವೈದ್ಯಕೀಯ ತಜ್ಞರ ಸಲಹೆಯಂತೆ, ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿರುವ ಕಾರಣ ಅವರನ್ನು ಅಗತ್ಯ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಜಂತರ್ ಮಂತರ್‌ನಲ್ಲಿ ಇರುವ ಪ್ರತಿಭಟನಾಕಾರರು ಶಾಂತಿಯುತವಾಗಿ ಸ್ಥಳವನ್ನು ಖಾಲಿ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪೊಲೀಸರ ಪ್ರಕಾರ, ಹೈಕೋರ್ಟ್ ಆದೇಶ ಜಾರಿಗೊಳಿಸುವ ವೇಳೆ ಕೆಲ ಪ್ರತಿಭಟನಾಕಾರರು ಅಡ್ಡಿಪಡಿಸಲು ಯತ್ನಿಸಿದ್ದು, ಸ್ವಲ್ಪ ಗೊಂದಲ ಉಂಟಾಯಿತು. ಆದರೆ ಪೊಲೀಸರು ಅತ್ಯಂತ ಸಂಯಮದಿಂದ ಪರಿಸ್ಥಿತಿಯನ್ನು ನಿಭಾಯಿಸಿ ಕಾರ್ಯಾಚರಣೆಯನ್ನು ಸುರಕ್ಷಿತವಾಗಿ ಪೂರ್ಣಗೊಳಿಸಿದರು...